ADVERTISEMENT

ಗುಲ್ಬರ್ಗ: ಬೀದಿ ನಾಯಿಗಳು

​ಪ್ರಜಾವಾಣಿ ವಾರ್ತೆ
Published 3 ಫೆಬ್ರುವರಿ 2012, 19:30 IST
Last Updated 3 ಫೆಬ್ರುವರಿ 2012, 19:30 IST

ಗುಲ್ಬರ್ಗ: ನಗರದ ಮೋಮಿನ್‌ಪುರದಲ್ಲಿ ಶುಕ್ರವಾರ ಬೆಳಿಗ್ಗೆ ಬೀದಿನಾಯಿಗಳು ಕಚ್ಚಿ ಸುಮಾರು 25 ಮಕ್ಕಳು ಗಾಯಗೊಂಡಿದ್ದಾರೆ.

ಶಾಲೆಗೆ, ಮದರಸಕ್ಕೆ ಹೋಗುತ್ತಿದ್ದ ಹಾಗೂ ಆಟವಾಡುತ್ತಿದ್ದ ಮಕ್ಕಳ ಮೇಲೆ ನಾಯಿಗಳು ಎರಗಿವೆ.
ಗಾಯಗೊಂಡ ಸುಮಾರು 13 ಮಕ್ಕಳಿಗೆ ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಯಿತು.

  ನಗರದ ಬ್ರಹ್ಮಪುರ, ಶಹಾಬಜಾರ್ ಮತ್ತಿತರ ಕಡೆಗಳಲ್ಲಿ ನಾಯಿಗಳು ಮಕ್ಕಳ ಮೇಲೆ ದಾಳಿ ನಡೆಸುವ ಪ್ರಕರಣಗಳು ಆಗಾಗ್ಗೆ ವರದಿಯಾಗುತ್ತಿದ್ದು, ಆಡಳಿತವು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ನಾಗರಿಕರು ಆಗ್ರಹಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.