ಮಡಿಕೇರಿ: ಕೆಸರುಗದ್ದೆ ಸೇರಿದಂತೆ ಗ್ರಾಮೀಣ ಕ್ರೀಡೆಗಳನ್ನು ಉತ್ತೇಜಿಸುವ ಅಗತ್ಯವಿದೆ ಎಂದು ವಿಧಾನಸಭಾಧ್ಯಕ್ಷ ಕೆ.ಜಿ.ಬೋಪಯ್ಯ ಅಭಿಪ್ರಾಯಪಟ್ಟರು.
ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ಜಿಲ್ಲಾ ಪಂಚಾಯಿತಿ, ಯೂತ್ ಹಾಸ್ಟೆಲ್ ಅಸೋಸಿಯೇಷನ್ ಆಫ್ ಇಂಡಿಯಾ, ಕೊಡಗು ಜಿಲ್ಲಾ ಯುವ ಒಕ್ಕೂಟ, ಹಾಕತ್ತೂರಿನ ತ್ರಿನೇತ್ರ ಯುವಕ ಸಂಘದ ಸಹಯೋಗದಲ್ಲಿ ಕಗ್ಗೋಡ್ಲು ಗ್ರಾಮದ ಸಿ.ಡಿ.ಬೋಪಯ್ಯನವರ ಗದ್ದೆಯಲ್ಲಿ ಏರ್ಪಡಿಸಿದ್ದ ರಾಜ್ಯ ಮಟ್ಟದ ಕೆಸರು ಗದ್ದೆ ಕ್ರೀಡಾಕೂಟಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಯುವಜನರು ಕ್ರೀಡೆಯಲ್ಲಿ ಆಸಕ್ತಿ ಬೆಳೆಸಿಕೊಳ್ಳಲು ರಾಜ್ಯ ಸರ್ಕಾರ ಹಲವು ಯೋಜನೆಗಳನ್ನು ರೂಪಿಸಿದೆ. ಯುವಕರಲ್ಲಿ ಕ್ರೀಡಾಸಕ್ತಿ, ರಾಷ್ಟ್ರಪ್ರೇಮ ತುಂಬುವಲ್ಲಿ ಯುವ ನೀತಿಯನ್ನು ಜಾರಿಗೆ ತರಲಾಗುತ್ತಿದೆ ಎಂದರು.
ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಶಾಂತೆಯಂಡ ರವಿಕುಶಾಲಪ್ಪ ಮಾತನಾಡಿದರು. ಸದಸ್ಯೆ ಕಾಂತಿ ಬೆಳ್ಯಪ್ಪ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಹೊಸಮನೆ ಕವಿತಾ ಪ್ರಭಾಕರ್, ತಾಲ್ಲೂಕು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಬೆಲ್ಲು ಸೋಮಯ್ಯ, ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕಿ ಜಿ.ಗಾಯತ್ರಿ, ಯೂತ್ ಹಾಸ್ಟೆಲ್ ಅಸೋಸಿಯೇಷನ್ ಆಫ್ ಇಂಡಿಯಾದ ರಾಜಶೇಖರ್, ಎಂ.ಪಿ.ರವಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.