ADVERTISEMENT

ಚಾಮರಾಜನಗರ ಜಿ.ಪಂ. ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2011, 16:30 IST
Last Updated 14 ಫೆಬ್ರುವರಿ 2011, 16:30 IST

ಚಾಮರಾಜನಗರ: ಜಿಲ್ಲಾ ಪಂಚಾಯಿತಿಯ ಮೊದಲ ಅವಧಿಗೆ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಕೆ. ರಾಜೇಶ್ವರಿ ಮತ್ತು ಉಪಾಧ್ಯಕ್ಷರಾಗಿ ಎಂ. ಸಿದ್ದರಾಜು ಅವಿರೋಧವಾಗಿ ಆಯ್ಕೆಯಾದರು.

ನಗರದ ಜಿ.ಪಂ. ಕೆಡಿಪಿ ಸಭಾಂಗಣದಲ್ಲಿ ಸೋಮವಾರ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಿತು. ಒಟ್ಟು 21 ಕ್ಷೇತ್ರಗಳಲ್ಲಿ ಕಾಂಗ್ರೆಸ್- 15 ಮತ್ತು ಬಿಜೆಪಿ 6 ಸಂಖ್ಯಾಬಲ ಹೊಂದಿದೆ. ಅಧ್ಯಕ್ಷ ಗದ್ದುಗೆ ಪರಿಶಿಷ್ಟ ಜಾತಿಯ ಮಹಿಳೆಗೆ ಮೀಸಲಾಗಿತ್ತು. ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಕ್ಷೇತ್ರಕ್ಕೆ ನಿಗದಿಯಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.