ಹುಬ್ಬಳ್ಳಿ: ರಾಜ್ಯ ಬಿಜೆಪಿ ಸರ್ಕಾರದಲ್ಲಿನ ರಾಜಕೀಯ ಪ್ರಹಸನ ಶೀಘ್ರ ಅಂತ್ಯ ಕಾಣಬೇಕಿದೆ. ಜನಾದೇಶಕ್ಕೆ ಮೊರೆಹೋಗುವುದೇ ಈ ಸಮಸ್ಯೆಗೆ ಅಂತಿಮ ಪರಿಹಾರವಾಗಿದೆ ಎಂದು ಮಾಜಿ ಸಚಿವ ಎಚ್.ಕೆ. ಪಾಟೀಲ ಅಭಿಪ್ರಾಯಪಟ್ಟರು.
ನಗರದಲ್ಲಿ ಭಾನುವಾರ ಶುದ್ಧ ನೀರಿನ ಘಟಕದ ಉದ್ಘಾಟನೆ ಸಂದರ್ಭದಲ್ಲಿ ಅವರು ಪತ್ರಕರ್ತರೊಡನೆ ಮಾತನಾಡಿದರು.
ರಾಜ್ಯದಲ್ಲಿ ಕಚಡಾ ರಾಜಕಾರಣ ನಡೆದಿದೆ. ಬರ ಪರಿಹಾರ ಕಾಮಗಾರಿಗಳ ಬಗ್ಗೆ ಚಿಂತನೆ ಮಾಡಬೇಕಾದ ಬಿಜೆಪಿ ಸಚಿವರು ನೀಚ ರಾಜಕಾರಣದಲ್ಲಿ ತೊಡಗಿದ್ದಾರೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.