ಬೆಂಗಳೂರು: 2012ನೇ ಸಾಲಿನ ಕನ್ನಡ ಟೊಟೊ ಪುರಸ್ಕಾರಕ್ಕಾಗಿ ಟಿಎಫ್‌ಎ ಸಂಸ್ಥೆ ಯುವ ಬರಹಗಾರರಿಂದ ಪ್ರವೇಶಗಳನ್ನು ಆಹ್ವಾನಿಸಿದೆ. ಕನ್ನಡದ ಸೃಜನಶೀಲ ಯುವ ಬರಹಗಾರರಿಗೆ ಮೀಸಲಾಗಿರುವ ಈ ಪುರಸ್ಕಾರಕ್ಕಾಗಿ ಬರಹಗಳನ್ನು ಕಳುಹಿಸುವವರು 18 ರಿಂದ 29 ವರ್ಷ ವಯಸ್ಸಿನವರಾಗಿರಬೇಕು.
ಕಥೆ, ಕವಿತೆ, ನಾಟಕ- ಈ ಮೂರರಲ್ಲಿ ಯಾವುದೇ ಪ್ರಕಾರದ ರಚನೆಗಳನ್ನು ಕಳಿಸಬಹುದು. ರೂ 25 ಸಾವಿರ ನಗದು ಬಹುಮಾನ ಹೊಂದಿದೆ.
ಪ್ರವೇಶಗಳನ್ನು ಕಳುಹಿಸಲು ಕೊನೆಯ ದಿನ ಅ. 15. ಟೊಟೊ ವಾರ್ಷಿಕ ಪ್ರಶಸ್ತಿಗಳನ್ನು ಛಾಯಾಚಿತ್ರ, ಸಂಗೀತ ಮತ್ತು ಸೃಜನಶೀಲ ಸಾಹಿತ್ಯ ಕ್ಷೇತ್ರಗಳಿಗೆ ಕೊಡಲಾಗುತ್ತದೆ. ವಿವರಕ್ಕೆ http://totofundsthearts.blogspot.com ಜಾಲತಾಣದಿಂದ ಪಡೆಯಬಹುದು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.