ಬಳ್ಳಾರಿ: ಗ್ರಾಮೀಣ ಪ್ರದೇಶದ ಯುವಜನತೆ ದೂರದರ್ಶನದಲ್ಲಿ ಪ್ರಸಾರವಾಗುವ ನೃತ್ಯ ಮತ್ತಿತರ ಕಾರ್ಯಕ್ರಮಗಳಿಗೆ ಮನಸೋತು, ಗ್ರಾಮೀಣ ಕ್ರೀಡೆ ಹಾಗೂ ಬಯಲಾಟದಂತಹ ಸಾಂಸ್ಕೃತಿಕ ಕಾರ್ಯಕ್ರಮಗಳಿಂದ ವಿಮುಖವಾಗಬಾರದು ಎಂದು ಜಿ.ಪಂ. ಉಪಾಧ್ಯಕ್ಷ ಕೆ.ಚೆನ್ನಬಸವನಗೌಡ ಸಲಹೆ ನೀಡಿದರು.
ಜಿಲ್ಲಾಡಳಿತ ಮತ್ತು ಕ್ರೀಡಾ ಇಲಾಖೆ ಗುರುವಾರ ನಗರದಲ್ಲಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಯುವ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ಯುವಕರು ಕೆಟ್ಟ ಸಂಸ್ಕೃತಿಗೆ ಮಾರು ಹೋಗಬಾರದು. ಯುವಜನ ಸೇವಾ ಇಲಾಖೆಯು ಗ್ರಾಮೀಣ ಕ್ರೀಡೆಗಳಿಗೆ ಮತ್ತು ನಾಟಕ, ಬಯಲಾಟ, ನೃತ್ಯದಂತಹ ಕಾರ್ಯಕ್ರಮಗಳಿಗೆ ವಿಶೇಷ ಯೋಜನೆ ರೂಪಿಸಿದ್ದು, ಯುವಕರು ಸದುಪಯೋಗ ಪಡಿಸಿಕೊಳ್ಳಬೇಕು ಎಂದರು. ಜಿಲ್ಲೆಯ ಎಲ್ಲ ತಾಲ್ಲೂಕುಗಳಿಂದ 300 ಯುವಕ ಸಂಘಗಳ ಅಭ್ಯರ್ಥಿಗಳು ಭಾಗವಹಿಸಿದ್ದರು.
ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ರಾಜು ಭಾವಿಹಳ್ಳಿ, ಮಲಕಪ್ಪ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.