ADVERTISEMENT

ದ್ವಿತಳಿ ರೇಷ್ಮೆಗೂಡು: ಕೆಜಿಗೆ ರೂ 35-40 ಪ್ರೋತ್ಸಾಹ ಧನ

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2012, 19:30 IST
Last Updated 16 ಏಪ್ರಿಲ್ 2012, 19:30 IST

ದಾವಣಗೆರೆ: ದ್ವಿತಳಿ ರೇಷ್ಮೆಗೂಡು ಉತ್ಪಾದಿಸುವ ಬೆಳೆಗಾರರಿಗೆ ಪ್ರೋತ್ಸಾಹಧನ ನೀಡಲು ಸರ್ಕಾರ ನಿರ್ಧರಿಸಿದೆ. 2012-13ನೇ ಸಾಲಿನಿಂದಲೇ ದ್ವಿತಳಿ ರೇಷ್ಮೆ ಗೂಡಿಗೆ ಪ್ರತಿ ಕೆ.ಜಿ.ಗೆ ರೂ 35-40 ಪ್ರೋತ್ಸಾಹಧನ ದೊರೆಯಲಿದೆ.

ಪ್ರಸ್ತುತ ಮಾರುಕಟ್ಟೆಯಲ್ಲಿ ದ್ವಿತಳಿ ರೇಷ್ಮೆಗೂಡಿಗೆ, ಕೆ.ಜಿ.ಗೆ ರೂ 240 ಇದೆ. ಪ್ರೋತ್ಸಾಹಧನ ಯೋಜನೆ ಜಾರಿಯಾದಲ್ಲಿ ರೈತರಿಗೆ ಹೆಚ್ಚುವರಿಯಾಗಿ ರೂ 35-40 ದೊರೆಯಲಿದೆ ಎಂದು ಕೃಷಿ ಇಲಾಖೆ ಉಪ ನಿರ್ದೇಶಕ ಎ.ಎಸ್. ಸಿದ್ದಯ್ಯ `ಪ್ರಜಾವಾಣಿ~ಗೆ ಮಾಹಿತಿ ನೀಡಿದರು.ಬೆಂಗಳೂರಿನಲ್ಲಿ ಇನ್ನೆರಡು ದಿನಗಳಲ್ಲಿ ಸಭೆ ನಡೆಯಲಿದ್ದು, ಈ ಬಗ್ಗೆ ಅಧಿಕೃತ ಆದೇಶ ಹೊರಬೀಳಲಿದೆ ಎಂದು ಸ್ಪಷ್ಟಪಡಿಸಿದರು.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.