ADVERTISEMENT

ಧೈರ್ಯಶಾಲಿ ಯುವಕರಿಂದ ಮಾತ್ರ ರಾಷ್ಟ್ರ ಸದೃಢ

​ಪ್ರಜಾವಾಣಿ ವಾರ್ತೆ
Published 2 ಜನವರಿ 2012, 19:30 IST
Last Updated 2 ಜನವರಿ 2012, 19:30 IST

ಬೀದರ್:  ಧೈರ್ಯಶಾಲಿ ಯುವಕ ರಿಂದ ಮಾತ್ರ ಸದೃಢ ರಾಷ್ಟ್ರ ನಿರ್ಮಾಣ ಸಾಧ್ಯ ಎಂದು ವಿಕಾಸ ಅಕಾಡೆಮಿಯ ಮುಖ್ಯ ಸಂಯೋಜ ಕರಾದ ಮಾಜಿ ಸಂಸದ ಬಸವರಾಜ ಪಾಟೀಲ್ ಸೇಡಂ ನುಡಿದರು.

ಸ್ವಾಮಿ ವಿವೇಕಾನಂದರ 150ನೇ ಜಯಂತಿ ನಿಮಿತ್ತ ಆಯೋಜಿಸಿರುವ ಜ್ಯೋತಿಯಾತ್ರೆಯನ್ನು ನಗರದ ಕರ್ನಾ ಟಕ ಫಾರ್ಮಸಿ ಕಾಲೇಜಿನಲ್ಲಿ ಸೋಮ ವಾರ ಉದ್ಘಾಟಿಸಿ ಮಾತನಾಡಿದರು.

ಯುವಕರು ಉನ್ನತ ಗುರಿ ಇಟ್ಟುಕೊಳ್ಳಬೇಕು. ಕೇವಲ ನೌಕರಿ ಗಾಗಿ ಪದವಿ ಪಡೆಯದೆ ರಾಷ್ಟ್ರದ ಏಳಿಗೆಗೆ ಶ್ರಮಿಸಬೇಕು. ಪರೋಪಕಾರಿ ಆಗುವಂಥ ವ್ಯಕ್ತಿತ್ವ ಮೈಗೂಡಿಸಿಕೊಳ್ಳ ಬೇಕು ಎಂದು ಸಲಹೆ ಮಾಡಿದರು.

ವಿವೇಕಾನಂದರು ಇಡೀ ಜಗತ್ತಿಗೆ ಭಾರತೀಯ ಸಂಸ್ಕೃತಿಯನ್ನು ಪರಿಚಯಿಸಿದ್ದರು. ಶಿಕಾಗೋದಲ್ಲಿ ಅವರು ನೀಡಿದ ಭಾಷಣ ಅವಿಸ್ಮರಣೀಯ ಎಂದು ಬಣ್ಣಿಸಿದರು.

ಆತ್ಮಬಲ ವೃದ್ಧಿಸುವ ಶಕ್ತಿ ವಿವೇಕಾನಂದರ ವಿಚಾರಗಳಲ್ಲಿ ಇದೆ. ಹೀಗಾಗಿ ಎಲ್ಲರು ವಿವೇಕಾನಂದರ ಜೀವನದ ಕುರಿತು ಅಧ್ಯಯನ ನಡೆಸಬೇಕು ಎಂದು ನೇತೃತ್ವ ವಹಿಸಿದ್ದ ಭಾಲ್ಕಿಯ ಬಸವಲಿಂಗ ಪಟ್ಟದ್ದೇವರು ಹೇಳಿದರು.

ರಾಮಕೃಷ್ಣ ಮಿಷನ್ ಅಧ್ಯಕ್ಷ ಜಿತಕಾನಂದ ಸ್ವಾಮೀಜಿ, ಸಾಹಿತಿ ಸೂಲಿಬೆಲೆ ಚಕ್ರವರ್ತಿ, ವಿಶೇಷಾನಂದ ಸ್ವಾಮೀಜಿ, ಜ್ಯೋತಿರ್ಮಯಾನಂದ ಸ್ವಾಮೀಜಿ, ಶಿವಯೋಗೀಶ್ವರ ಸ್ವಾಮೀಜಿ ಮಾತನಾಡಿದರು.
 
ಶಾಸಕ ರಹೀಮ್‌ಖಾನ್, ಬಿಡಿಎ ಅಧ್ಯಕ್ಷ ಬಾಬುರಾವ ಮದಕಟ್ಟಿ, ಸ್ವಾಗತ ಸಮಿತಿಯ ಅಧ್ಯಕ್ಷ ಚನ್ನಬಸಪ್ಪ ಹಾಲಹಳ್ಳಿ, ಶಾಹೀನ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಅಬ್ದುಲ್ ಖದೀರ್ ಮತ್ತಿತರರು ಉಪಸ್ಥಿತರಿದ್ದರು.

ವಿಕಾಸ ಅಕಾಡೆಮಿಯ ಜಿಲ್ಲಾ ಸಂಚಾಲಕ ರೇವಣಸಿದ್ದಪ್ಪ ಜಲಾದೆ ಸ್ವಾಗತಿಸಿದರು. ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿ ಸುರೇಶ ಚನಶೆಟ್ಟಿ ನಿರೂಪಿಸಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.