ADVERTISEMENT

ನೀರಿಗಾಗಿ ನೀರೆಯರ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 1 ಫೆಬ್ರುವರಿ 2011, 18:35 IST
Last Updated 1 ಫೆಬ್ರುವರಿ 2011, 18:35 IST

ತುಮಕೂರು: ನಗರದ ಭೀಮಸಂದ್ರ ಬಡಾವಣೆಯ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿ ಮಹಿಳೆಯರು ಮಂಗಳವಾರ ಖಾಲಿ ಕೊಡ ಪ್ರದರ್ಶನ ಮಾಡಿ ಪ್ರತಿಭಟನೆ ನಡೆಸಿದರು.

ಭೀಮಸಂದ್ರದಲ್ಲಿ ಕಳೆದ ಮೂರು ತಿಂಗಳಿನಿಂದ ನೀರಿನ ಸಮಸ್ಯೆ ಇದ್ದು, ಈ ಬಗ್ಗೆ ಹಲವು ಬಾರಿ ಮನವಿ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ ಎಂದು ಆರೋಪಿಸಿ ಘೋಷಣೆ ಕೂಗಿದರು. ಬಡಾವಣೆಯ ಕೊಳವೆ ಬಾವಿ ದುರಸ್ತಿಗೆ ಸಹ ನಗರಪಾಲಿಕೆ ಕ್ರಮಕೈಗೊಂಡಿಲ್ಲ. ಕೊಳವೆ ಬಾವಿ ಮೋಟರ್ ಕೆಟ್ಟು ತಿಂಗಳುಗಳೇ ಕಳೆದಿದ್ದರೂ ಗಮನಹರಿಸಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಇದೇ ವಾರ್ಡ್ ಸದಸ್ಯ ಮಂಜುನಾಥ್ ಅವರಿಗೆ ಮುತ್ತಿಗೆ ಹಾಕಿದ ಮಹಿಳೆಯರು, ಸಮಸ್ಯೆ ಬಗೆಹರಿಸುವಂತೆ ಆಗ್ರಹಿಸಿದರು. ಸಮಸ್ಯೆ ಬಗ್ಗೆ ಗಮನಹರಿಸಿಲ್ಲವೆಂದು ಪಾಲಿಕೆ ಸದಸ್ಯರನ್ನು ತರಾಟೆಗೆ ತೆಗೆದುಕೊಂಡರು. ಕೊಳವೆ ಬಾವಿಗಳನ್ನು ದುರಸ್ತಿಗೊಳಿಸಲು ಕ್ರಮಕೈಗೊಳ್ಳಲಾಗಿದೆ. ಅಲ್ಲದೆ ಮತ್ತೊಂದು ಕೊಳವೆ ಬಾವಿ ಕೊರೆಸಲು ಜಾಗ ಗುರುತಿಸಲಾಗಿದೆ ಎಂದು ಮಂಜುನಾಥ್ ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂತೆಗೆದುಕೊಳ್ಳಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.