ADVERTISEMENT

ನೆರೆ ಸಂತ್ರಸ್ತರಿಗೆ ಮನೆ ಹಸ್ತಾಂತರ

​ಪ್ರಜಾವಾಣಿ ವಾರ್ತೆ
Published 2 ಜನವರಿ 2012, 19:30 IST
Last Updated 2 ಜನವರಿ 2012, 19:30 IST

ಜೇವರ್ಗಿ: ತಾಲ್ಲೂಕಿನ ನೇದಲಗಿ ಕ್ರಾಸ್‌ದಿಂದ-ಬೇಲೂರವರೆಗಿನ (ಬಳ್ಳುಂಡಗಿ ಮಾರ್ಗವಾಗಿ) 9ಕಿ.ಮೀ. ರಸ್ತೆಯನ್ನು 1.80 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುವುದೆಂದು ಶಾಸಕ ದೊಡ್ಡಪ್ಪಗೌಡ ಪಾಟೀಲ ನರಿಬೋಳ ಸೋಮವಾರ ಹೇಳಿದರು.

ತಾಲ್ಲೂಕಿನ ಬಳ್ಳುಂಡಗಿ ಗ್ರಾಮದಲ್ಲಿ 2009-10ನೇ ಸಾಲಿನ ನೆರೆ ಸಂತ್ರಸ್ತರಿಗೆ ಆಸರೆ ಯೋಜನೆಯಡಿಯಲ್ಲಿ ನಿರ್ಮಿಸಿದ 41 ಮನೆಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಿ ಅವರು ಮಾತನಾಡಿದರು.

ಪ್ರವಾಹ ಸಂತ್ರಸ್ತರಿಗೆ ಶಾಶ್ವತ ಪುನರ್ವಸತಿ ಕಲ್ಪಿಸಲು ತಾಲ್ಲೂಕಿನ 16 ಗ್ರಾಮಗಳನ್ನು ಸ್ಥಳಾಂತರಿಸಲಾಗಿದೆ. ಪ್ರವಾಹ ಸಂತ್ರಸ್ತರಿಗಾಗಿ 806ಆಸರೆ ಮನೆಗಳನ್ನು ನಿರ್ಮಿಸಲಾಗಿದೆ. ಆಸರೆ ಬಡಾವಣೆಯಲ್ಲಿ ಮೂಲ ಸೌಲಭ್ಯ ಕಲ್ಪಿಸಲಾಗುವುದು ಎಂದರು.

ಗುಡಿಸಲುಗಳಲ್ಲಿ ವಾಸಿಸುತ್ತಿರುವ ಕುಟುಂಬಗಳಿಗೆ ಬಸವ ಇಂದಿರಾ ಆವಾಸ್ ಯೋಜನೆಯಲ್ಲಿ ಮನೆಗಳನ್ನು ನಿರ್ಮಿಸಲಾಗುವುದು. ಗ್ರಾಮದಲ್ಲಿ 4 ಲಕ್ಷ ವೆಚ್ಚದಲ್ಲಿ ಮಹಿಳಾ ಶೌಚಾಲಯವನ್ನು ನಿರ್ಮಿಸಲಾಗಿದೆ. ಗ್ರಾಮದ ವಿವಿಧ ಅಭಿವೃದ್ಧಿಗೆ 52.96 ಲಕ್ಷ ಅನುದಾನವನ್ನು ಸುವರ್ಣ ಗ್ರಾಮ ಯೋಜನೆಯಲ್ಲಿ ನೀಡಲಾಗಿದೆ ಎಂದರು.

ನಂತರ ಶಾಸಕರು ಇಟಗಾ ಗ್ರಾಮದಲ್ಲಿ ನೆರೆ ಸಂತ್ರಸ್ತರಿಗಾಗಿ ನಿರ್ಮಿಸಿದ 31 ಮನೆಗಳನ್ನು ಹಸ್ತಾಂತರಿಸಿದರು.
ಬಳ್ಳುಂಡಗಿ ಗ್ರಾಪಂ ಅಧ್ಯಕ್ಷ ಮುತ್ತಣ್ಣ ಸಂಗೊಂಡ ಅಧ್ಯಕ್ಷತೆ ವಹಿಸಿದ್ದರು. ಹೈದರಾಬಾದ-ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಅಧ್ಯಕ್ಷ ಅಮರನಾಥ ಪಾಟೀಲ, ಗುಲ್ಬರ್ಗ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ವಿದ್ಯಾಸಾಗರ ಕುಲಕರ್ಣಿ, ತಾಪಂ ಅಧ್ಯಕ್ಷೆ ವಿಜಯಲಕ್ಷ್ಮಿ ಆಂದೋಲಾ, ಉಪಾಧ್ಯಕ್ಷ ರೇವಣಸಿದ್ದಪ್ಪಗೌಡ ಕಮಾನಮನಿ, ಸದಸ್ಯ ಸಿದ್ಧಲಿಂಗಪ್ಪ ನಡುವಿನಮನಿ, ತಹಶೀಲ್ದಾರ್ ಡಿ.ವೈ.ಪಾಟೀಲ, ಭೂಸೇನಾ ನಿಗಮದ ಸಹಾಯಕ ನಿರ್ದೇಶಕ ಹಣಮಂತಪ್ಪ ಅವ್ವಾರಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಪಲ್ಲಾ ನರಸಿಂಹರಡ್ಡಿ, ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಸುಭಾಷ ನಾಯಕವಾಡ, ಕ್ಷೇತ್ರ ಶಿಕ್ಷಣಾಧಿಕಾರಿ ಗುರಣ್ಣ ಗುಂಡಗುರ್ತಿ ಮತ್ತಿತರರು ಮುಖ್ಯ ಅತಿಥಿಗಳಾಗಿದ್ದರು.
    

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.