ADVERTISEMENT

ಪರಿಣಾಮಕಾರಿ ಆಡಳಿತಕ್ಕೆ ತರಬೇತಿ ಅಗತ್ಯ

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2011, 19:30 IST
Last Updated 12 ಅಕ್ಟೋಬರ್ 2011, 19:30 IST

ನರಸಿಂಹರಾಜಪುರ: ಗ್ರಾಮ ಪಂಚಾಯಿತಿಗಳಿಗೆ ನೂತನವಾಗಿ ಆಯ್ಕೆಯಾದ ಸದಸ್ಯರು ಉತ್ತಮವಾಗಿ ಕಾರ್ಯ ನಿರ್ವಹಿಸಲು ತರಬೇತಿ ಅಗತ್ಯ ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಪ್ರೇಮಾ ಹೇಳಿದರು.

ಅಬ್ದುಲ್ ನಜೀರ್‌ಸಾಬ್ ಗ್ರಾಮೀಣಾಭಿವೃದ್ಧಿ ಸಂಸ್ಥೆ ಆಶ್ರಯದಲ್ಲಿ ಇಲ್ಲಿನ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಆರಂಭಗೊಂಡ ತಾಲ್ಲೂಕಿನ 14 ಗ್ರಾಮ ಪಂಚಾಯಿತಿ ಸದಸ್ಯರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಕಾರ್ಯದರ್ಶಿಗಳ 2ನೇ ಹಂತದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಸಂಪನ್ಮೂಲ ವ್ಯಕ್ತಿ ಸೋಮಶೇಖರ್ ಮಾತನಾಡಿ, ತಾಲ್ಲೂಕಿನ 14 ಗ್ರಾಮ ಪಂಚಾಯಿತಿಗಳ 156 ಸದಸ್ಯರಿಗೆ ತರಬೇತಿ ನೀಡಲಾಗುತ್ತದೆ. ಮೊದಲ ದಿನ ಸೀತೂರು, ಗುಬ್ಬಿಗಾ, ಕಡಹಿನಬೈಲು ಗ್ರಾಮ ಪಂಚಾಯಿತಿಯ 28 ಸದಸ್ಯರಿಗೆ ತರಬೇತಿ ನೀಡಲಾಗುತ್ತಿದೆ ಎಂದರು.  ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಬಿ.ಜಿ.ಮಾಳಮ್ಮನವರ್ ಮಾತನಾಡಿದರು.

ಗುಬ್ಬಿಗಾ ಮತ್ತು ಕಡಹಿನಬೈಲು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಲೋಕೇಶ್ ಮತ್ತು ಗ್ರೇಸಿ ಬಾಬು, ಮೊಗಣ್ಣಗೌಡ ಮತ್ತಿತರರಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.