ADVERTISEMENT

ಪರಿಸರ ಸಂರಕ್ಷಣೆ ಎಲ್ಲರ ಹೊಣೆ

​ಪ್ರಜಾವಾಣಿ ವಾರ್ತೆ
Published 15 ಜೂನ್ 2011, 19:30 IST
Last Updated 15 ಜೂನ್ 2011, 19:30 IST

ಬೀದರ್: ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಕುಶಾಲ ಪಾಟೀಲ್ ಗಾದಗಿ ಸಲಹೆ ಮಾಡಿದರು.ಜೀವವೈವಿಧ್ಯ ಸಂರಕ್ಷಣೆ ಕುರಿತು ನಗರದ ಜಿಲ್ಲಾ ರಂಗಮಂದಿರದಲ್ಲಿ ಬುಧವಾರ ಏರ್ಪಡಿಸಿದ್ದ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.ಪರಿಸರ ಮಾಲಿನ್ಯವಾದರೆ ಹಲವು ತೊಂದರೆ ಉಂಟಾಗುತ್ತವೆ. ಆದ್ದರಿಂದ ಎಲ್ಲರು ತಮ್ಮ ಮನೆ ಮಾತ್ರವಲ್ಲದೆ ಶಾಲೆಗಳಲ್ಲಿ ಸಹ ಸಸಿಗಳನ್ನು ನೆಟ್ಟು ಪೋಷಿಸಬೇಕು ಎಂದು ಹೇಳಿದರು.

ಪರಿಸರ ಉಳಿಸಿ ಉಳಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜಿಲ್ಲೆಯಾದ್ಯಂತ ಜೀವವೈವಿಧ್ಯ ಸಮಿತಿಗಳನ್ನು ರಚಿಸಲಾಗಿದೆ. ಮರಗಿಡಗಳನ್ನು ಸಂರಕ್ಷಿಸುವ ನಿಟ್ಟಿನಲ್ಲಿ ಸಮಿತಿಗಳು ಸಕ್ರಿಯವಾಗಿ ಕಾರ್ಯ ನಿರ್ವಹಿಸಬೇಕು ಎಂದರು.

ಉಪ ಅರಣ್ಯ ಸಂರಕ್ಷಣಾಧಿಕಾರಿ ಆರ್. ಶಿವಶಂಕರಪ್ಪ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಕೆ.ಎನ್. ಸುಗಾರ್, ಗುಲ್ಬರ್ಗ ವಲಯ ಅರಣ್ಯ ಅಧಿಕಾರಿ ಆರ್. ರಾಧಾದೇವಿ, ಪ್ರಾದೇಶಿಕ ಅರಣ್ಯ ಸಂರಕ್ಷಣಾಧಿಕಾರಿ ಮಣಿಕಂಠನ್, ಸಾಮಾಜಿಕ ಅರಣ್ಯ ಸಂರಕ್ಷಣಾಧಿಕಾರಿ ದೌಲತ್ ಹುಸೇನ್, ರಾಜಶ್ರೀ ಪಾಟೀಲ್, ಪ್ರೊ. ಎಸ್.ವಿ.ಕಲ್ಮಠ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.