ADVERTISEMENT

ಪಿ.ಯು.ವಿದ್ಯಾರ್ಥಿನಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2012, 19:30 IST
Last Updated 1 ಏಪ್ರಿಲ್ 2012, 19:30 IST

ನರಸಿಂಹರಾಜಪುರ: ಪ್ರಥಮ ಪಿಯುಸಿಯಲ್ಲಿ ಅನುತ್ತೀರ್ಣಳಾಗಿದ್ದಕ್ಕೆ ಮನನೊಂದು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರ ನಡೆದಿದೆ.

ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ತಾಲ್ಲೂಕಿನ ನಾಗಲಾಪುರ ಗ್ರಾಮದ ದಿಂಡಿನಕೊಪ್ಪ ನಿವಾಸಿ ಚಿತ್ರಾ (17) ಆತ್ಮಹತ್ಯೆ ಮಾಡಿಕೊಂಡವಳು.

ಶನಿವಾರ ಪ್ರಥಮ ಪಿಯುಸಿ ಪರೀಕ್ಷೆ ಯ ಫಲಿತಾಂಶ ಪ್ರಕಟವಾಗಿದ್ದು, ಚಿತ್ರಾ ನಾಲ್ಕು ವಿಷಯಗಳಲ್ಲಿ ಅನುತ್ತೀರ್ಣಳಾಗಿದ್ದಳು. ಜಮೀನಿಗೆ ಹೋಗಿ ಬರುವುದಾಗಿ ಮನೆಯಿಂದ ಹೋದ ಆಕೆ ಸಂಜೆಯಾದರೂ ಹಿಂತಿರುಗದೆ ಇದ್ದುದರಿಂದ ಪೋಷಕರು ಶೋಧ ನಡೆಸಿದಾಗ ಜಮೀನಿನಲ್ಲಿದ್ದ ಕೃಷಿ ಹೊಂಡಕ್ಕೆಹಾರಿ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. 
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.