ADVERTISEMENT

ಪ್ರಾದೇಶಿಕ ಪಕ್ಷ ರಚನೆ

​ಪ್ರಜಾವಾಣಿ ವಾರ್ತೆ
Published 19 ಅಕ್ಟೋಬರ್ 2012, 19:30 IST
Last Updated 19 ಅಕ್ಟೋಬರ್ 2012, 19:30 IST

ಗುಲ್ಬರ್ಗ: ಬಿಜೆಪಿ ಮುಖಂಡ, ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿ ಅಧ್ಯಕ್ಷ  ವೈಜನಾಥ ಪಾಟೀಲ ನೂತನ ಪ್ರದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ.

ಶುಕ್ರವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸಂಬಂಧ ನವೆಂಬರ್ ತಿಂಗಳಲ್ಲಿ ಸಭೆ ಕರೆದು ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿ ಹೆಸರಲ್ಲಿ ಪ್ರಾದೇಶಿಕ ಪಕ್ಷ ಸ್ಥಾಪಿಸುವ ನಿಟ್ಟಿನಲ್ಲಿ ಯೋಚಿಸಲಾಗುವುದು ಎಂದು ತಿಳಿಸಿದರು.

ನೈಸ್ ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕ ಅಶೋಕ ಖೇಣಿ ಮತ್ತು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ತಮ್ಮ ಸ್ವಹಿತಾಸಕ್ತಿಯ ಹಿನ್ನೆಲೆಯಲ್ಲಿ ಹೊಸ ಪಕ್ಷ ರಚಿಸುತ್ತಿರುವಾಗ, ಸಾರ್ವಜನಿಕ ವಿಷಯಗಳನ್ನು ಮುಂದಿಟ್ಟುಕೊಂಡು ತಾವೇಕೆ ನೂತನ ಪಕ್ಷ ನಿರ್ಮಿಸಬಾರದು ಎಂದು ಪ್ರಶ್ನಿಸಿದರು.

ಗುರುವಾರ ಇಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಹೈದರಾಬಾದ್ ಕರ್ನಾಟಕ ಪ್ರದೇಶದ ಅಭಿವೃದ್ಧಿಗಾಗಿ ಉಪ ಸಮಿತಿ ರಚಿಸುವ ನಿರ್ಣಯ ಅಗತ್ಯವಿರಲಿಲ್ಲ. ಈ ನಿರ್ಣಯವನ್ನು ಸರ್ಕಾರ ಕೂಡಲೇ ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.