ಮೈಸೂರು: ರಾಜ್ಯದಲ್ಲಿ ತಲೆದೋರಿರುವ ಬರಗಾಲವನ್ನು ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಉತ್ತಮ ಆಡಳಿತ ನೀಡುತ್ತದೆ ಎಂದು ಸರ್ಕಾರದ ಮೇಲೆ ಜನತೆ ಇಟ್ಟ ನಂಬಿಕೆಯನ್ನು ಬಿಜೆಪಿ ಹುಸಿಗೊಳಿಸಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಘಟಕದ ಅಧ್ಯಕ್ಷ ಚಾಮರಸ ಮಾಲೀ ಪಾಟೀಲ್ ಆರೋಪಿಸಿದರು.
ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, 123 ತಾಲ್ಲೂಕುಗಳು ಬರ ಪೀಡಿತವಾಗಿದ್ದು, ಕುಡಿಯುವ ನೀರಿಗೂ ತತ್ವಾರ ಉಂಟಾಗಿದೆ. ಜಾನುವಾರುಗಳಿಗೆ ಮೇವು ಇಲ್ಲದೆ ರೈತರು ಕಸಾಯಿಖಾನೆಗೆ ಮಾರಾಟ ಮಾಡುತ್ತಿದ್ದಾರೆ. ಕೂಲಿ ಕಾರ್ಮಿಕರು ಕೆಲಸ ಅರಸಿ ಗುಳೆ ಹೋಗುತ್ತಿದ್ದಾರೆ. ಆದರೆ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬರ ಪರಿಸ್ಥಿತಿಯನ್ನು ರಾಜಕೀಯಕ್ಕೆ ಬಳಸಿಕೊಳ್ಳಲು ಸ್ಪರ್ಧೆ ನಡೆಸುತ್ತಿದ್ದಾರೆ ಎಂದು ಕಿಡಿಕಾರಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.