ADVERTISEMENT

ಬರ: 22 ರಂದು ಕಾಂಗ್ರೆಸ್ ವರದಿ

​ಪ್ರಜಾವಾಣಿ ವಾರ್ತೆ
Published 11 ಏಪ್ರಿಲ್ 2012, 19:30 IST
Last Updated 11 ಏಪ್ರಿಲ್ 2012, 19:30 IST

ರಾಯಚೂರು: ಈಗ ರಾಜ್ಯದಲ್ಲಿ ಬಿದ್ದಿರುವ ಬರಗಾಲ ಪರಿಸ್ಥಿತಿ ನಿಭಾಯಿಸಲು ರಾಜ್ಯ ಸರ್ಕಾರ ಒಂದು ರೂಪಾಯಿಯನ್ನೂ ಮೀಸಲಿಟ್ಟಿಲ್ಲ. ರಾಜ್ಯವ್ಯಾಪಿ ಬರ ಪರಿಸ್ಥಿತಿ ವೀಕ್ಷಿಸಿದ ಬಳಿಕ ಇದೇ 22ರಂದು ರಾಜ್ಯ ಸರ್ಕಾರಕ್ಕೆ ತಮ್ಮ ಪಕ್ಷ ವರದಿ ಕೊಡಲಿದೆ ಎಂದು ರಾಜ್ಯ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಬರಗಾಲದಿಂದ 4,500 ಕೋಟಿ ಮೊತ್ತದ ಬೆಳೆ ನಷ್ಟವಾಗಿರುವ ಬಗ್ಗೆ ಅಂದಾಜಿಸಲಾಗಿದೆ. ಇದ್ಯಾವುದಕ್ಕೂ ಸರ್ಕಾರ ಸ್ಪಂದಿಸಿಲ್ಲ ಎಂದು ತಿಳಿಸಿದರು. ಬುಧವಾರ ಬರಗಾಲ ಪರಿಸ್ಥಿತಿ ವೀಕ್ಷಣೆಗೆ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.