ADVERTISEMENT

ಬಸ್ ಸೌಲಭ್ಯಕ್ಕೆ ವಿದ್ಯಾರ್ಥಿಗಳ ಆಗ್ರಹ

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2011, 18:10 IST
Last Updated 2 ಫೆಬ್ರುವರಿ 2011, 18:10 IST

ತುಮಕೂರು: ನಗರದ ಎಲ್ಲ ಕಾಲೇಜುಗಳಿಗೆ ಸಮಯಕ್ಕೆ ಸರಿಯಾಗಿ ಬಸ್ ಸೌಲಭ್ಯ ಕಲ್ಪಿಸುವಂತೆ ಆಗ್ರಹಿಸಿ ವಿವಿಧ ಕಾಲೇಜು ವಿದ್ಯಾರ್ಥಿಗಳು ಬುಧವಾರ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮುಂದೆ ಮತಪ್ರದರ್ಶನ ನಡೆಸಿದರು.

ನಗರದ ಯೂನಿಯನ್ ಕ್ರಿಶ್ಚಿಯನ್ ಕಾಲೇಜು, ಕೆಎಸ್‌ಇಎಫ್, ಶ್ರೀದೇವಿ ಕಾಲೇಜು ವಿದ್ಯಾರ್ಥಿಗಳು ಕರ್ನಾಟಕ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಮತಪ್ರದರ್ಶನ ನಡೆಸಿ ಸಾರಿಗೆ ಇಲಾಖೆ ಅಧಿಕಾರಿ ಶ್ರೀನಿವಾಸ್ ಅವರಿಗೆ ಮನವಿ ಸಲ್ಲಿಸಿದರು.

ನಗರದ ಸಾಕಷ್ಟು ಶಾಲೆ, ಕಾಲೇಜುಗಳಿಗೆ ಬಸ್ ವ್ಯವಸ್ಥೆ ಇಲ್ಲ. ಅಲ್ಲದೆ ಕಾಲೇಜು ಆರಂಭವಾಗುವ ಸಮಯಕ್ಕೆ ಮತ್ತು ಮುಗಿಯುವ ಸಮಯಕ್ಕೆ ಬಸ್‌ಗಳು ಇರುವುದಿಲ್ಲ. ವಿದ್ಯಾರ್ಥಿಗಳನ್ನು ಕೆಎಸ್‌ಆರ್‌ಟಿಸಿ ನಿರ್ಲಕ್ಷ್ಯಿಸಿದೆ. ಈ ಬಗ್ಗೆ ಹಲವಾರು ಬಾರಿ ಮನವಿ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ. ಸಮಸ್ಯೆ ಬಗೆಹರಿಸಲು ಕ್ರಮಕೈಗೊಳ್ಳದಿದ್ದರೆ ರಸ್ತೆತಡೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ನಗರದ ಎಲ್ಲ ಶಾಲೆ- ಕಾಲೇಜುಗಳಿಗೆ ಮಾರ್ಗಗಳನ್ನು ನಿಗದಿಪಡಿಸಿ ಬಸ್ ವ್ಯವಸ್ಥೆ ಮಾಡಬೇಕು ಎಂದು ಕೋರಿದರು. ಒಂದು ವಾರದೊಳಗೆ ಹೆಚ್ಚುವರಿ ಬಸ್ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಅಧಿಕಾರಿಗಳು ಭರವಸೆ ನೀಡಿದರು.

ವಿದ್ಯಾರ್ಥಿ ಮುಖಂಡರಾದ ದರ್ಶನ್‌ಗೌಡ, ಕರ್ಣಸ್ವಾಮಿ, ಅಂಬರೀಷ್, ಮಂಜುನಾಥ್, ಕೃಷ್ಣಮೂರ್ತಿ, ನಾಸೀರ್‌ಅಹ್ಮದ್, ಸಿದ್ದೇಶ್, ಮಧು, ಪವಿತ್ರ, ಚೇತನ್, ಸಿಂಧು ಮುಂತಾದವರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.