ADVERTISEMENT

ಬಾಲ ಕಾರ್ಮಿಕ ಪದ್ಧತಿ ಕೊನೆಗೊಳ್ಳಲಿ

​ಪ್ರಜಾವಾಣಿ ವಾರ್ತೆ
Published 1 ಜನವರಿ 2012, 19:30 IST
Last Updated 1 ಜನವರಿ 2012, 19:30 IST

ಬಾಗಲಕೋಟೆ: ಅಪಾಯಕಾರಿ ಕೆಲಸಗಳಲ್ಲಿ ಮಕ್ಕಳನ್ನು ದುಡಿಮೆಗೆ ತೊಡಗಿಸುವುದನ್ನು ನಿಷೇಧಿಸಿದ್ದರೂ ಇಂಥ ಉದ್ದಿಮೆಗಳಲ್ಲಿ ಬಾಲ ಕಾರ್ಮಿಕರನ್ನು ನೇಮಿಸಿಕೊಳ್ಳುತ್ತಿರುವುದು ವಿಷಾದದ ಸಂಗತಿ ಎಂದು ಜಿಲ್ಲಾ ಸೆಷನ್ಸ್ ನ್ಯಾಯಾಧೀಶ ಶಿವಶಂಕರ ಅಮರಣ್ಣವರ ಹೇಳಿದರು.

ನವನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಸೋಮವಾರ ಏರ್ಪಡಿಸಿದ ಮಕ್ಕಳ ಹಕ್ಕುಗಳ ಕಾಯ್ದೆ ಕುರಿತ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಸ್.ಆರ್. ಮನಹಳ್ಳಿ ಮಾತನಾಡಿ, ಬಾಲಕಾರ್ಮಿಕ ಪದ್ಧತಿ ಮತ್ತು ಜೀತ ಪದ್ಧತಿ ಸಮಾಜದ ಕಳಂಕಗಳಾಗಿವೆ.

ಇವುಗಳನ್ನು ಕಾನೂನಿನಿಂದ ನಿವಾರಿಸಲು ಅಸಾಧ್ಯ. ಶಿಕ್ಷಣ, ಅರಿವು ಮತ್ತು ಪ್ರಚಾರದಿಂದ ಮಾತ್ರ ನಿವಾರಣೆ ಸಾಧ್ಯ ಎಂದರು.

ಉಪ ವಿಭಾಗಾಧಿಕಾರಿ ಗೋವಿಂದ ರೆಡ್ಡಿ,  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಎಸ್.ಎಚ್.ಪಾಟೀಲ, ನ್ಯಾಯಾಧೀಶ ಬಸವರಾಜ ಚೇಗರೆಡ್ಡಿ, ಜಿ.ಬಿ. ಜೋಷಿ, ಎಸ್.ಬಿ. ಹೊಸಗಲ್ಲಿ, ಎಂ.ಎಸ್. ತಿಮ್ಮೊಲಿ, ಕಾರ್ಮಿಕ ಅಧಿಕಾರಿ ಸಿ.ವಿ. ಹೊರಟ್ಟಿ, ಸುಧಾಕರ ಬಡಿಗೇರ ಪಾಲ್ಗೊಂಡಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.