ರಾಯಚೂರು: ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ 4 ಟಿ.ಎಂ.ಸಿ. ನೀರನ್ನು ಕರ್ನಾಟಕ್ಕೆ ಬಿಡಲು ಮಹಾರಾಷ್ಟ್ರ ಸರ್ಕಾರವು ಸಕಾರಾತ್ಮಕವಾಗಿ ಸ್ಪಂದಿಸಿ ನೀರು ಬಿಡಲು ಒಪ್ಪಿದೆ. ಕರ್ನಾಟಕಕ್ಕೆ ನೀರು ಬಿಡಬಾರದು ಎಂಬ ಶಿವಸೇನಾ ಸಂಘಟನೆಯ ಬಾಳ ಠಾಕ್ರೆ ಹೇಳಿಕೆಯಿಂದ ನಾವೇನೂ ಧೃತಿಗೆಡಬೇಕಾಗಿಲ್ಲ ಎಂದು ಜಲಸಂಪನ್ಮೂಲ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.
ಮಂಗಳವಾರ ಜಿಲ್ಲೆಯ ಬರ ಪರಿಸ್ಥಿತಿ ಕುರಿತ ಕೈಗೊಂಡ ಕ್ರಮಗಳ ಬಗ್ಗೆ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ಬರಗಾಲ ಪರಿಸ್ಥಿತಿ ಹಿನ್ನೆಲೆಯಲ್ಲಿ ರೈತರ ಸಾಲ ಪೂರ್ಣ ಮನ್ನಾ ಮಾಡುವ ಬಗ್ಗೆ ಎಲ್ಲ ಜಿಲ್ಲೆಗಳಲ್ಲೂ ರೈತರು ಮನವಿ ಮಾಡುತ್ತಿದ್ದಾರೆ. ಮುಖ್ಯಮಂತ್ರಿಗಳೊಂದಿಗೆ ಈ ಬಗ್ಗೆ ಸಮಗ್ರವಾಗಿ ಚರ್ಚಿಸಿ ಒಂದು ವಾರದಲ್ಲಿ ತೀರ್ಮಾನ ಕೈಗೊಳ್ಳಲಾಗುವುದು. ಬರಸ್ಥಿತಿಯಲ್ಲಿ ಕೈಗೊಳ್ಳುವ ಕಾಮಗಾರಿ ಸಮರ್ಪಕ ರೀತಿ ನಡೆಯಬೇಕು.
ಅಕ್ರಮ ವಾಸನೆ ನುಸುಳಬಾರದು. ಇದಕ್ಕಾಗಿ ಅಧಿಕಾರಿ ಮಟ್ಟದಲ್ಲಿಯೇ ನಿರ್ವಹಣಾ ಸಮಿತಿ ರೂಪಿಸಲಾಗಿದೆ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.