ADVERTISEMENT

ಬಿಮ್ಸ್ ನರ್ಸಿಂಗ್ ಮರು ಪರೀಕ್ಷೆ

​ಪ್ರಜಾವಾಣಿ ವಾರ್ತೆ
Published 23 ಫೆಬ್ರುವರಿ 2011, 16:20 IST
Last Updated 23 ಫೆಬ್ರುವರಿ 2011, 16:20 IST

ಬೀದರ್: ಪರೀಕ್ಷಾ ಅವ್ಯವಹಾರದ ಹಿನ್ನೆಲೆಯಲ್ಲಿ ರದ್ದುಗೊಳಿಸಲಾಗಿದ್ದ ಡಿಪ್ಲೊಮಾ ನರ್ಸಿಂಗ್ ಪರೀಕ್ಷೆಯನ್ನು ಮಾ.8ರಿಂದ ಬೀದರ್ ಮೆಡಿಕಲ್ ಕಾಲೇಜಿನಲ್ಲಿ ನಡೆಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ರಾಮದಾಸ್ ತಿಳಿಸಿದರು.

ಜಿಲ್ಲೆಯಲ್ಲಿ ನರ್ಸಿಂಗ್ ಡಿಪ್ಲೊಮಾ ಪರೀಕ್ಷೆ ನಡೆಸುವ ಕುರಿತಾಗಿ ಬುಧವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ವಿವಿಧ ಸಂಘಟನೆಗಳ ಪ್ರತಿನಿಧಿಗಳು, ನರ್ಸಿಂಗ್ ಕಾಲೇಜು ಆಡಳಿತ ಮಂಡಳಿ ಪ್ರತಿನಿಧಿಗಳು ಮತ್ತು ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿದ ಬಳಿಕ ಈ ವಿಷಯ ಸುದ್ದಿಗಾರರಿಗೆ ತಿಳಿಸಿದರು.

ಬೀದರ್ ಜಿಲ್ಲೆಯ ನರ್ಸಿಂಗ್ ಕಾಲೇಜುಗಳು ಬೆಂಗಳೂರಿನಲ್ಲಿ ನರ್ಸಿಂಗ್ ಡಿಪ್ಲೊಮಾ ಪರೀಕ್ಷೆ ನಡೆಸುತ್ತಿದ್ದ ಸಂದರ್ಭದಲ್ಲಿ ವ್ಯಾಪಕ ಅಕ್ರಮ ನಡೆದಿರುವುದನ್ನು ಪತ್ತೆ ಹಚ್ಚಲಾಗಿದೆ. ಈ ಹಿನ್ನೆಲೆಯಲ್ಲಿ ಪರೀಕ್ಷೆ ರದ್ದುಗೊಳಿಸಲಾಗಿತ್ತು. ಇನ್ನು ಮುಂದೆ ಪರೀಕ್ಷೆಗಳು ಆಯಾ ಜಿಲ್ಲೆಯಲ್ಲೇ ನಡೆಯಲಿವೆ. ಬೇರೆ ಜಿಲ್ಲೆಗಳಲ್ಲಿ ನಡೆಸಲು ಅನುಮತಿ ನೀಡಲಾಗದು. ನರ್ಸಿಂಗ್ ಬೋರ್ಡ್ ಅನುಮತಿ ಇಲ್ಲದೇ ಪರೀಕ್ಷಾ ಕೇಂದ್ರವನ್ನು ಬೆಂಗಳೂರಿಗೆ ವರ್ಗಾ ಯಿಸಲು ಅನುಮತಿ ನೀಡಿದ ಅಧಿಕಾರಿ ಗಳ ವಿರುದ್ಧ ಕ್ರಮ ಕೈಗೊಳ್ಳ ಲಾಗುತ್ತಿದೆ ಎಂದು ಹೇಳಿದರು.

ಜಿಲ್ಲಾಧಿಕಾರಿ  ಸಮೀರ್ ಶುಕ್ಲಾ, ಪೊಲೀಸ್ ವರಿಷ್ಠಾಧಿಕಾರಿ  ಸತೀಶ್ಕುಮಾರ್, ಜಿ.ಪಂ. ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜಿತೇಂದ್ರನಾಯಕ್ ಮತ್ತಿತರರು ಉಪಸ್ಥಿತರಿದ್ದರು. 
 
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.