ಮೈಸೂರು: ‘ರೈತ ವಿರೋಧಿ ಹಾಗೂ ವಿದೇಶಿ ಕಂಪೆನಿಗಳಿಗೆ ಲಾಭದಾಯಕವಾಗಿರುವ ‘ಬೀಜ ಕಾಯಿದೆ’ ನೀತಿ ಜಾರಿ ಹಾಗೂ ರೈತರ ಕೃಷಿ ಭೂ-ಕಬಳಿಕೆ ವಿರೋಧಿಸಿ ಮಾ. 9ರಂದು ರೈತ ಸಂಘಟನೆಗಳ ಮುಖಂಡರೊಂದಿಗೆ ದೆಹಲಿ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ರೈತ ಪರ ಹೋರಾಟಗಾರ್ತಿ ಚುಕ್ಕಿ ನಂಜುಂಡಸ್ವಾಮಿ ಹೇಳಿದರು.
‘ದೇಶದಾದ್ಯಂತ ಎಲ್ಲಾ ಪ್ರಮುಖ ರೈತ ಸಂಘಟನೆಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, ಕರ್ನಾಟಕದಿಂದ ಸುಮಾರು 5 ಸಾವಿರ ರೈತರು ಪಾಲ್ಗೊಳ್ಳಲಿದ್ದಾರೆ. ಅಖಿಲ ಭಾರತ ರೈತ ಸಂಘಟನೆಗಳ ಒಕ್ಕೂಟದಿಂದ ದೆಹಲಿ ಸುತ್ತಮುತ್ತಲಿನ ರಸ್ತೆಗಳನ್ನು ಬಂದ್ ಮಾಡುವ ಮೂಲಕ ಪ್ರತಿಭಟಿಸಲಾಗುವುದು’ ಎಂದು ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.