ಸಿಂದಗಿ: ಭಾವೈಕ್ಯದ ಹೂದೋಟವಾಗಿರುವ ಗಣಿಹಾರ ಗ್ರಾಮದಲ್ಲಿ ಹಿಂದೂ-ಮುಸ್ಲಿಮರು ಒಂದಾಗಿ ಧರ್ಮದ ಕಾರ್ಯ ಮಾಡುತ್ತಿರುವುದು ಅನುಕರಣೀಯ ಎಂದು ಉಜ್ಜಯಿನಿ ಪೀಠದ ಜಗದ್ಗುರು ಸಿದ್ಧಲಿಂಗ ದೇಶಿಕೇಂದ್ರ ಶಿವಾಚಾರ್ಯ ಸ್ವಾಮೀಜಿ ಶ್ಲಾಘಿಸಿದರು.
ತಾಲ್ಲೂಕಿನ ಗಣಿಹಾರ ಗ್ರಾಮದಲ್ಲಿ ಮಂಗಳವಾರ ನಂದಿ ಬಸವೇಶ್ವರ ಜಾತ್ರಾ ಮಹೋತ್ಸವ, ಸಹಸ್ರ ದೀಪೋತ್ಸವ ಹಾಗೂ ಪುರಾಣ ಮಹಾಮಂಗಲ ಹಾಗೂ ಧರ್ಮಸಭೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
`ಸಾಧನೆಯಿಂದ ಗುರುತಿಸಿಕೊಳ್ಳುವವನೇ ನಿಜವಾದ ವೀರ. ನುಡಿದಂತೆ ನಡೆಯುವುದೇ ನಿಜವಾದ ಧರ್ಮ. ನಿಮ್ಮನ್ನು ನೀವು ರಕ್ಷಿಸಿಕೊಳ್ಳುವುದಲ್ಲದೇ ಇತರರ ರಕ್ಷಣೆಗೆ ಮುಂದಾಗಬೇಕು~ ಎಂದರು.
ಕೇಂದ್ರದ ಮಾಜಿ ಸಚಿವ ಬಸನಗೌಡ ಪಾಟೀಲ ಯತ್ನಾಳ, ಮಾಜಿ ಸಚಿವ ಎಂ.ಸಿ. ಮನಗೂಳಿ, ಶಾಸಕ ರಮೇಶ ಭೂಸನೂರ, ಅಖಿಲ ಭಾರತ ವೀರಶೈವ ಮಹಾಸಭೆ ತಾಲ್ಲೂಕು ಶಾಖೆ ಅಧ್ಯಕ್ಷ ಅಶೋಕವಾರದ ಹಾಗೂ ಮಾಜಿ ಶಾಸಕ ಎಸ್.ಟಿ.ಸುಣಗಾರ, ಜಿ.ಪಂ. ಮಾಜಿ ಉಪಾಧ್ಯಕ್ಷ ಮಲ್ಲಣ್ಣ ಸಾಲಿ, ಗೊಲ್ಲಾಳಪ್ಪಗೌಡ ಪಾಟೀಲ ಮಾಗಣಗೇರಿ, ಗೊಲ್ಲಾಳಪ್ಪಗೌಡ ಪಾಟೀಲ ಗೋಲಗೇರಿ ಮಾತನಾಡಿದರು.
ಕನ್ನೊಳ್ಳಿ ಹಿರೇಮಠದ ಮರುಳಾರಾಧ್ಯ ಶಿವಾಚಾರ್ಯರು, ಸಿಂದಗಿ ಸಾರಂಗಮಠ-ಗಚ್ಚಿನಮಠದ ಪ್ರಭು ಸಾರಂಗದೇವ ಶಿವಾಚಾರ್ಯರು, ಅಫಜಲಪುರ ಸಂಸ್ಥಾನ ಹಿರೇಮಠದ ವಿಶ್ವರಾಧ್ಯ ಮಳೇಂದ್ರ ಶಿವಾಚಾರ್ಯರು, ಬೋರಗಿ-ಪುರದಾಳ ತಪೋರತ್ನಂ ಮಹಾಲಿಂಗೇಶ್ವರ ಶಿವಾಚಾರ್ಯರು ಸಾನ್ನಿಧ್ಯ ವಹಿಸಿದ್ದರು.
ಜಿ.ಪಂ. ಅಧ್ಯಕ್ಷೆ ಸಾವಿತ್ರಿ ಲಕ್ಷ್ಮಣ ಅಂಗಡಿ, ವಿಜಾಪುರ ಸಿಕ್ಯಾಬ್ ಶಿಕ್ಷಣ ಸಂಸ್ಥೆ ಕಾರ್ಯದರ್ಶಿ ಅಕ್ಬರ್ ಪಟೇಲ್, ಅಬಕಾರಿ ಇಲಾಖೆ ಡಿವೈಎಸ್‌ಪಿ ಸೂರ್ಯಕಾಂತ ಸುಣಗಾರ, ಬಶೀರ್ ಅಹ್ಮದ್ ಕಾಲೂಭಾಯಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.