ADVERTISEMENT

ಭಾಷಾಭಿಮಾನ ಬೆಳೆಸಿಕೊಳ್ಳಲು ಸಲಹೆ

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2011, 19:30 IST
Last Updated 25 ನವೆಂಬರ್ 2011, 19:30 IST
ಭಾಷಾಭಿಮಾನ ಬೆಳೆಸಿಕೊಳ್ಳಲು ಸಲಹೆ
ಭಾಷಾಭಿಮಾನ ಬೆಳೆಸಿಕೊಳ್ಳಲು ಸಲಹೆ   

 ಕುಶಾಲನಗರ: ಪ್ರತಿಯೊಬ್ಬ ಕನ್ನಡಿಗರು ತಮ್ಮ ತಾಯ್ನೊಡಿನ ಭಾಷೆಯ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಬೇಕು ಎಂದು ಪಟ್ಟಣ ಪಂಚಾಯ್ತಿ ಅಧ್ಯಕ್ಷೆ ಚರಿತಾ   ಪ್ರಕಾಶ್ ಇಲ್ಲಿ ಕರೆ ನೀಡಿದರು.

ಆಟೊ ಚಾಲಕರು ಮತ್ತು ಮಾಲೀಕರ ಸಂಘ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಇಲ್ಲಿನ ಕೆಎಸ್‌ಆರ್‌ಟಿಸಿ ನಿಲ್ದಾಣದ ಆವರಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಕನ್ನಡ ರಾಜೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಧ್ವಜಾರೋಹಣ ನೆರವೇರಿಸಿದ ಬಿಜೆಪಿ ಹಿರಿಯ ಮುಖಂಡ ಜಿ.ಎಲ್.ನಾಗರಾಜು ಮಾತನಾಡಿ `ಪ್ರಾಚೀನ ಇತಿಹಾಸ ಹೊಂದಿರುವ ಕನ್ನಡ ಭಾಷೆಯನ್ನು ಉಳಿಸಿ ಬೆಳೆಸಲು ಕಂಕಣಬದ್ಧರಾಗಬೇಕು ಎಂದು ಕರೆ ನೀಡಿದರು.

 ಪ.ಪಂ.ಉಪಾಧ್ಯಕ್ಷ ಎಚ್.ಜೆ.ಕರಿಯಪ್ಪ ಮಾತನಾಡಿದರು. ಆಟೊ ಚಾಲಕರ ಸಂಘದ ಉಪಾಧ್ಯಕ್ಷ ಕಿಟ್ಟಿ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಕುಮುದಾಧರ್ಮಪ್ಪ, ಜಿಲ್ಲಾ ಕಾರ್ಯದರ್ಶಿ ಬಿ.ಎಸ್.ಚಂದ್ರಶೇಖರ್, ಕರವೇ ಜಿಲ್ಲಾಧ್ಯಕ್ಷ ವೆಂಕಟೇಶ್ ಪೂಜಾರಿ, ನಗರಾಧ್ಯಕ್ಷ ಟಿ.ಆರ್.ಪ್ರಭುದೇವ್, ರಾಜ್ಯೋತ್ಸವ ಆಚರಣಾ ಸಮಿತಿ ಅಧ್ಯಕ್ಷ ಆರ್.ಮೋಹನ್, ಮಾಜಿ ಅಧ್ಯಕ್ಷ ವಿ.ಪಿ.ನಾಗೇಶ್,ರಮೇಶ್, ಯೂತ್ ಪ್ರೆಂಡ್ಸ್ ಅಧ್ಯಕ್ಷ ರಫೀಕ್, ಗ್ರಾ.ಪಂ.ಪ್ರಸನ್ನ, ಪ್ರವೀಣ್, ಮುಖಂಡರಾದ ರಮೇಶ್,ಮಹೇಶ್, ಹಂಸಾದ್ ಹುಸೇನ್ ಮತ್ತಿತರರು ಸಮಾರಂಭದಲ್ಲಿ ಹಾಜರಿದ್ದರು. ಎಂ.ನಂಜುಂಡಸ್ವಾಮಿ ಕಾರ್ಯಕ್ರಮ ನಿರ್ವಹಿಸಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT