ADVERTISEMENT

ಭೂ ಹೋರಾಟ ಜಾಗೃತಿ ಜಾಥಾಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 18 ಏಪ್ರಿಲ್ 2012, 19:30 IST
Last Updated 18 ಏಪ್ರಿಲ್ 2012, 19:30 IST

ಚಿಕ್ಕಬಳ್ಳಾಪುರ: ಭೂ ಸುಧಾರಣಾ ಕಾಯ್ದೆ ಜಾರಿ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘ ಮತ್ತು ಕರ್ನಾಟಕ ಪ್ರಾಂತ ಕೃಷಿ ಕೂಲಿಕಾರರ ಸಂಘವು ಹಮ್ಮಿಕೊಂಡಿರುವ ಜಾಗೃತಿ ಜಾಥಾಗೆ ಬುಧವಾರ ನಗರದಲ್ಲಿ ಚಾಲನೆ ನೀಡಲಾಯಿತು.

ಸಿಪಿಎಂ ರಾಜ್ಯ ಘಟಕದ ಕಾರ್ಯದರ್ಶಿ ಜಿ.ವಿ.ಶ್ರೀರಾಮರೆಡ್ಡಿ ಇದಕ್ಕೆ ಚಾಲನೆ ನೀಡಿದರು.

`ಭೂ ಹೋರಾಟದ ಉದ್ದೇಶದಿಂದಲೇ ರಾಜ್ಯದಾದ್ಯಂತ ಒಟ್ಟಾರೆ ಐದು ಜಾಥಾಗಳು ನಡೆಯಲಿವೆ. ಮೇ 21ರಂದು ಬೆಂಗಳೂರಿನಲ್ಲಿ ನಡೆಯುವ ಬೃಹತ್ ಸಮಾವೇಶದಲ್ಲಿ 50 ಸಾವಿರಕ್ಕೂ ಹೆಚ್ಚು ಜನ ಭಾಗವಹಿಸಲಿದ್ದಾರೆ~ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಅಧ್ಯಕ್ಷ ಮಾರುತಿ ಮಾನ್ಪಡೆ ತಿಳಿಸಿದರು.

`ಚಿಕ್ಕಬಳ್ಳಾಪುರದಿಂದ ಆರಂಭಗೊಂಡಿರುವ ಜಾಥಾ ಕೋಲಾರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಸಂಚರಿಸಲಿದೆ. ಶಿಡ್ಲಘಟ್ಟ, ಚಿಂತಾಮಣಿ, ಬಾಗೇಪಲ್ಲಿ, ಗುಡಿಬಂಡೆ, ಗೌರಿಬಿದನೂರು, ದೊಡ್ಡಬಳ್ಳಾಪುರ, ನೆಲಮಂಗಲ, ಹೊಸಕೋಟೆ, ಮಾಲೂರು, ಬಂಗಾರಪೇಟೆ ಮತ್ತು ಕೋಲಾರ ತಾಲ್ಲೂಕುಗಳಲ್ಲಿ ಸಂಚರಿಸಲಿದೆ.

ಈ ತಿಂಗಳ 29ರಂದು ಕೋಲಾರದಲ್ಲಿ ನಡೆಯುವ ಬೃಹತ್ ಸಮಾವೇಶದಲ್ಲಿ ಜಾಥಾ ಸಮಾರೋಪಗೊಳ್ಳಲಿದೆ~ ಎಂದು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಚನ್ನರಾಯಪ್ಪ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.