ADVERTISEMENT

ಭ್ರೂಣ ಪತ್ತೆ ಪ್ರಕರಣ: 29 ಆಸ್ಪತ್ರೆಗಳ ದಾಖಲೆ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 1 ಜನವರಿ 2012, 19:30 IST
Last Updated 1 ಜನವರಿ 2012, 19:30 IST

ಶಿವಮೊಗ್ಗ: ನಗರದಲ್ಲಿ 24 ಭ್ರೂಣಗಳು ಪತ್ತೆಯಾದ ಹಿನ್ನೆಲೆಯಲ್ಲಿ ಶಿವಮೊಗ್ಗದ 29 ಆಸ್ಪತ್ರೆಗಳ ಮೇಲೆ ಭಾನುವಾರ ಉಪ ವಿಭಾಗಾಧಿಕಾರಿ ಎಂ.ಎಲ್. ವೈಶಾಲಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಡಾ.ಚನ್ನಬಸಪ್ಪ ನೇತೃತ್ವದಲ್ಲಿ ಮೂರು ತಂಡಗಳು ದಾಳಿ ನಡೆಸಿ, ಆಸ್ಪತ್ರೆಯಲ್ಲಿ ನಡೆಸಿದ ಲಿಂಗಪತ್ತೆ ಪರೀಕ್ಷೆಗೆ ಸಂಬಂಧಿಸಿದಂತೆ ದಾಖಲೆಗಳ ಪರಿಶೀಲನೆ ನಡೆಸಿದವು.

ಬಹುತೇಕ ಆಸ್ಪತ್ರೆಗಳಲ್ಲಿ ದಾಖಲೆಗಳನ್ನು ಸರಿಯಾಗಿ ನಿರ್ವಹಿಸಿಲ್ಲ. ಲಿಂಗಪತ್ತೆ ಪರೀಕ್ಷೆ ನಡೆಸಲಾಗಿದೆ ಎಂದು ದಾಖಲೆಯಲ್ಲಿ ತಿಳಿಸಲಾಗಿದೆ. ಆದರೆ, ಯಾವ ಕಾರಣಕ್ಕಾಗಿ ಲಿಂಗಪತ್ತೆ ಪರೀಕ್ಷೆ ನಡೆಸಲಾಗಿದೆ ಎಂಬ ಮಾಹಿತಿಯಿಲ್ಲ. ಜೊತೆಗೆ ಪರೀಕ್ಷೆಯ ನಂತರ ಯಾವ ಚಿಕಿತ್ಸೆ ನೀಡಲಾಗಿದೆ ಅಥವಾ ಗರ್ಭಪಾತ (ಅಬಾರ್ಷನ್) ಮಾಡಲಾಗಿದೆಯೇ ಎಂಬ ಬಗ್ಗೆಯೂ ಮಾಹಿತಿಯಿಲ್ಲ ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಎಲ್ಲಾ ಆಸ್ಪತ್ರೆಗಳ ಮುಖ್ಯಸ್ಥರಿಗೆ ಎಚ್ಚರಿಕೆಯನ್ನು ನೀಡಲಾಗಿದ್ದು, ಈ ಆಸ್ಪತ್ರೆಗಳ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಜಿಲ್ಲಾಡಳಿತ ಪರಿಶೀಲನೆ ನಡೆಸಲಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಚನ್ನಬಸಪ್ಪ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.