ADVERTISEMENT

ಮಂಗಳೂರು, ಹುಬ್ಬಳ್ಳಿ , ಮೈಸೂರಲ್ಲಿ ಸೈಬರ್ ಠಾಣೆ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2011, 19:30 IST
Last Updated 21 ಸೆಪ್ಟೆಂಬರ್ 2011, 19:30 IST

ಮಂಗಳೂರು: ಮೈಸೂರು, ಹುಬ್ಬಳ್ಳಿ-ಧಾರವಾಡ ಹಾಗೂ ಮಂಗಳೂರಿನಲ್ಲಿ ಸೈಬರ್ ಅಪರಾಧ ಪೊಲೀಸ್ ಠಾಣೆಗಳನ್ನು ಶೀಘ್ರದಲ್ಲಿಯೇ ಆರಂಭಿಸಲಾಗುವುದು ಎಂದು ರಾಜ್ಯ ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ. ಎಂ.ಎಸ್.ಜಾಮದಾರ್ ಹೇಳಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾಧ ಪ್ರಕರಣ ಹೆಚ್ಚುತ್ತಿವೆ. ಬೆಂಗಳೂರಿನಲ್ಲಿ ಮಾತ್ರ ಸೈಬರ್ ಅಪರಾಧ ಪೊಲೀಸ್ ಠಾಣೆ ಇದೆ. ಕೇಂದ್ರ ಸರ್ಕಾರದಿಂದ 15 ದಿನಗಳ ಹಿಂದೆ ಮಾರ್ಗಸೂಚಿ ಬಂದಿದ್ದು, ಹೊಸದಾಗಿ ಮೂರು ಠಾಣೆ ಸ್ಥಾಪಿಸಲಾಗುತ್ತಿದೆ ಎಂದರು.

2008ರ ಐಟಿ ಕಾಯ್ದೆ ಪ್ರಕಾರ 26 ಬಗೆಯ ಸೈಬರ್ ಅಪರಾಧಗಳಲ್ಲಿ 23ರಲ್ಲಿ ಆರೋಪಿಗಳಿಗೆ 7ರಿಂದ 10 ವರ್ಷಗಳರೆಗೆ ಶಿಕ್ಷೆ ವಿಧಿಸಲು ಅವಕಾಶ ಇದೆ. ರೂ. 10 ಲಕ್ಷದವರೆಗೂ ದಂಡ ವಿಧಿಸಬಹುದಾಗಿದೆ. ಮೂರು ಬಗೆಯಲ್ಲಿ 3 ವರ್ಷದವರೆಗೆ ಶಿಕ್ಷೆ ವಿಧಿಸಬಹುದಾಗಿದೆ ಎಂದು ವಿವರಿಸಿದರು.

ಪೊಲೀಸ್ ಇಲಾಖೆ ಆಧುನೀಕರಣಕ್ಕೆ ಕೇಂದ್ರ ಸರ್ಕಾರದಿಂದ ಈ ಬಾರಿ ರೂ. 84 ಕೋಟಿ ಬಂದಿದೆ. ರಾಜ್ಯದ ಫೊರೆನ್ಸಿಕ್ ಸೈನ್ಸ್ ಘಟಕ ವಿಸ್ತರಣೆ ಹಾಗೂ ಆಧುನೀಕರಣಕ್ಕೆ ರೂ. 3 ಕೋಟಿ ಯೋಜನೆ ರೂಪಿಸಲಾಗುವುದು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.