ಮಂಡ್ಯ: ಮುಖ್ಯಮಂತ್ರಿ ಸ್ಥಾನದಿಂದ ಡಿ.ವಿ.ಸದಾನಂದಗೌಡ ಅವರನ್ನು ಪದಚ್ಯುತಿಗೊಳಿಸಿರುವ ಬಿಜೆಪಿ ವರಿಷ್ಠರ ಕ್ರಮ ಖಂಡಿಸಿ ಸ್ವಾಭಿಮಾನಿ ಒಕ್ಕಲಿಗರ ಸೇವಾ ಒಕ್ಕೂಟವು ಜುಲೈ 11 ರಂದು ಮಂಡ್ಯ ಬಂದ್‌ಗೆ ಕರೆ ನೀಡಿದೆ.
ಬೆಳಿಗ್ಗೆಯಿಂದಲೇ ಮೈಸೂರು ಬೆಂಗಳೂರು ರಸ್ತೆ ಬಂದ್ ಮಾಡಲಾಗುವುದು ಎಂದು ಒಕ್ಕೂಟದ ಅಧ್ಯಕ್ಷ ಡಾ.ಎಂ.ಎಸ್.ಲೋಕೇಶ್‌ಬಾಬು ಎಚ್ಚರಿಸಿದ್ದಾರೆ. ಬಿಜೆಪಿ ಹೈಕಮಾಂಡ್, ಈ ವಿಷಯವಾಗಿ ಸೂಕ್ತ ನಿರ್ಧಾರ ಕೈಗೊಳ್ಳದೆ ಜಗದೀಶ ಶೆಟ್ಟರ್ ಅವರಿಗೆ ಮುಖ್ಯಮಂತ್ರಿ ಪಟ್ಟ ಕಟ್ಟಲು ಮುಂದಾಗಿದೆ. ಶೆಟ್ಟರ್ ಅವರನ್ನು ಮುಖ್ಯಮಂತ್ರಿ ಮಾಡಿದರೆ, ಪ್ರಮಾಣ ವಚನ ಸ್ವೀಕಾರ ವೇಳೆ ವಿಧಾನಸೌಧದ ಎದುರು ಬೃಹತ್ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಸ್ವಚ್ಛ, ದಕ್ಷ ಆಡಳಿತ ಮಾಡುತ್ತಿದ್ದ ಸದಾನಂದಗೌಡ ಅವರನ್ನು ವಿನಾ ಕಾರಣ ಕೇವಲ ಒಕ್ಕಲಿಗ ಎಂಬ ಕಾರಣಕ್ಕಾಗಿ ಪದಚ್ಯುತಿಗೊಳಿಸಿ, ರಾಜಕೀಯ ಅರಾಜಕತೆ ಸೃಷ್ಟಿಸಲಾಗಿದೆ ಎಂದು ಟೀಕಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.