ADVERTISEMENT

ಮಕ್ಕಳಿಗೆ ಆರೋಗ್ಯ ರಕ್ಷಣೆ ತಿಳಿವಳಿಕೆ ಅಗತ್ಯ

​ಪ್ರಜಾವಾಣಿ ವಾರ್ತೆ
Published 1 ಆಗಸ್ಟ್ 2012, 19:30 IST
Last Updated 1 ಆಗಸ್ಟ್ 2012, 19:30 IST

ಬಳ್ಳಾರಿ : ಮಕ್ಕಳು ತಮ್ಮ ಆರೋಗ್ಯವನ್ನು ಸಂರಕ್ಷಣೆ ಮಾಡಿಕೊಳ್ಳುವ ಬಗ್ಗೆ ತಿಳಿವಳಿಕೆ ಹೊಂದಿರಬೇಕೆಂದು ಹೆಚ್ಚುವರಿ ಜಿಲ್ಲಾಧಿಕಾರಿ  ಸಿ. ವಿಜಯಕುಮಾರ್ ಬುಧವಾರ ಇಲ್ಲಿ ಹೇಳಿದರು.

ಜಿಲ್ಲಾಡಳಿತ, ಜಿ.ಪಂ,  ಶಿಕ್ಷಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ  ಇಲಾಖೆ ಹಾಗೂ ಆಯುಷ್ ಇಲಾಖೆಗಳ ಸಹಕಾರದಲ್ಲಿ ನಗರದ ಸಂತ ಫಿಲೋಮಿನಾ ಬಾಲಕಿಯರ ಪ್ರೌಢಶಾಲೆಯಲ್ಲಿ ಆಯೋಜಿಸಿದ್ದ ಸುವರ್ಣ ಆರೋಗ್ಯ ಚೈತನ್ಯ ಕಾರ್ಯಕ್ರಮ-2012 ಉದ್ಘಾಟಿಸಿ ಮಾತನಾಡಿದರು.

ಈ ಕಾರ್ಯಕ್ರಮದ ಅನ್ವಯ ಇದೇ 30ರವರೆಗೆ ಒಂದು ತಿಂಗಳ ಕಾಲ ಜಿಲ್ಲೆಯ ಎಲ್ಲ ಸರ್ಕಾರಿ, ಅನುದಾನಿತ, ಅನುದಾನ ರಹಿತ ಹಾಗೂ ವಸತಿ ಶಾಲೆಗಳ 1 ರಿಂದ 10ನೇ ತರಗತಿವರೆಗಿನ ಎಲ್ಲ ಮಕ್ಕಳ ಆರೋಗ್ಯ ತಪಾಸಣೆ ಮಾಡಲಾಗುವುದು. ಸಂಬಂಧಿಸಿದ ಶಾಲೆಗಳ ಮುಖ್ಯ ಶಿಕ್ಷಕರು, ಶಿಕ್ಷಕರು ಜವಾಬ್ದಾರಿ ವಹಿಸಿಕೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು.

ಜಿಲ್ಲಾ ಸರ್ಜನ್ ಡಾ. ಪಂಪಾಪತಿ ಮಾತನಾಡಿ, ವಿದ್ಯಾರ್ಥಿಗಳು ಗಂಭೀರ ಕಾಯಿಲೆಯಿಂದ ಬಳಲುತ್ತಿದ್ದರೆ, ಮತ್ತಿತರ ಆರೋಗ್ಯದ ಸಮಸ್ಯೆಗಳೇನಾದರೂ ಇದ್ದಲ್ಲಿ ತಪಾಸಣೆಯಿಂದ ಪತ್ತೆ ಹಚ್ಚಬಹುದು ಎಂದರು.

ಜಿಲ್ಲಾ ಆಯುಷ್ ಅಧಿಕಾರಿ ಡಾ. ವೀರನಗೌಡ ಪಾಟೀಲ್ ಮಾತನಾಡಿದರು. ಜಿ.ಪಂ. ಉಪಕಾರ್ಯದರ್ಶಿ  ಮಹೇಶ್ವರಯ್ಯ ವಹಿಸಿದ್ದರು  ಅಧ್ಯಕ್ಷತೆವಹಿಸಿದ್ದರು. ಶಿಕ್ಷಣ ಇಲಾಖೆಯ ಉಪನಿರ್ದೇಶಕ ಟಿ. ನಾರಾಯಣಗೌಡ ಸ್ವಾಗತಿಸಿ ಯೋಜನೆ ಬಗ್ಗೆ ಮಾಹಿತಿ ನೀಡಿದರು. ಬಿಒಒ ಶ್ರೀನಿವಾಸ ರೆಡ್ಡಿ ವಂದಿಸಿದರು.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.