ADVERTISEMENT

ಮಕ್ಕಳ ಕಲಿಕೆಗೆ ಪಾಲಕರ ಒತ್ತಡ ಸಲ್ಲ

​ಪ್ರಜಾವಾಣಿ ವಾರ್ತೆ
Published 10 ಅಕ್ಟೋಬರ್ 2012, 19:30 IST
Last Updated 10 ಅಕ್ಟೋಬರ್ 2012, 19:30 IST

ಚಿಕ್ಕಮಗಳೂರು: ಪಾಲಕರು ಕಲಿಕೆಯ ಮೇಲೆ ಒತ್ತಡ ಹೇರುತ್ತಿರುವುದರಿಂದ ಮಕ್ಕಳು ಮಾನಸಿಕ ಒತ್ತಡಕ್ಕೆ ಒಳಗಾಗುತ್ತಿದ್ದಾರೆ. ಅವರ ಮೇಲೆ ಒತ್ತಡ ಹೇರಬಾರದು ಎಂದು ಜಿಲ್ಲಾ ಪ್ರಧಾನ ನ್ಯಾಯಾಧೀಶ ಬಿ.ಎ. ಪಾಟೀಲ್ ತಿಳಿಸಿದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆರೋಗ್ಯ ಇಲಾಖೆ, ವಾರ್ತಾ ಇಲಾಖೆ, ವಕೀಲರ ಸಂಘ, ಮೌಂಟೆನ್‌ವ್ಯೆ ವಿದ್ಯಾಸಂಸ್ಥೆ ಆಶ್ರಯದಲ್ಲಿ ಜಿಲ್ಲಾ ನ್ಯಾಯಾಲಯದಲ್ಲಿ ಬುಧವಾರ ಏರ್ಪಡಿಸಿದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

 ಆಸ್ಪತ್ರೆಯ ಮನೋವೈದ್ಯ ಸುನೀಲ್ ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ  ಬಿ.ವಿ. ನೀರಜ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ಸರ್ಜನ್ ಒ.ಜಿ.ಪ್ರಕಾಶ್, ವಕೀಲರ ಸಂಘದ ಅಧ್ಯಕ್ಷ ಕೆ.ಎಂ. ಅಬ್ದುಲ್ ಜಬ್ಬಾರ್, ವಾರ್ತಾಧಿಕಾರಿ ಬಿ.ಎ. ಖಾದರ್ ಶಾ, ಮೌಂಟೆನ್‌ವ್ಯೆ ಶಾಲೆ ಮುಖ್ಯಶಿಕ್ಷಕಿ ಎನ್.ಎಂ.ಗಾಯತ್ರಿ, ಹಿರಿಯ ಸಿವಿಲ್ ನ್ಯಾಯಾಧೀಶರಾದ ಬಿ.ವಿ. ರೇಣುಕಾ, ಎಚ್.ಎಸ್. ಸುರೇಶ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.