ADVERTISEMENT

ಮಕ್ಕಳ ಪ್ರತಿಭೆ ಬೆಳೆಸಲು ಸಲಹೆ

​ಪ್ರಜಾವಾಣಿ ವಾರ್ತೆ
Published 2 ಫೆಬ್ರುವರಿ 2012, 19:30 IST
Last Updated 2 ಫೆಬ್ರುವರಿ 2012, 19:30 IST

ದಾವಣಗೆರೆ: ದೈಹಿಕ ಶಿಕ್ಷಣ ಶಿಕ್ಷಕರು ಇಲಾಖೆಯಿಂದ ನೀಡುವ ತರಬೇತಿಯ ಲಾಭ ಪಡೆದು ವಿದ್ಯಾರ್ಥಿಗಳ ಪ್ರತಿಭೆಯನ್ನು ಹೊರಹೊಮ್ಮಿಸಲು ಪ್ರಯತ್ನಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಬಿ.ಎ. ರಾಜಶೇಖರ್ ಕರೆ ನೀಡಿದರು.

ಜಿಲ್ಲಾ ಪಂಚಾಯ್ತಿ, ಸಾರ್ವಜನಿಕ ಶಿಕ್ಷಣ ಇಲಾಖೆ, ದಾವಣಗೆರೆ ದಕ್ಷಿಣ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ, ದಾವಣಗೆರೆ ತಾಲ್ಲೂಕು ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ದೈಹಿಕ ಶಿಕ್ಷಣ ಶಿಕ್ಷಕರ ಸಂಘ (ನಗರ ಘಟಕ)ದ ವತಿಯಿಂದ, ನಗರದ ಸೇಂಟ್ ಪಾಲ್ಸ್ ಕಾನ್ವೆಂಟ್‌ನಲ್ಲಿ ಗುರುವಾರ ಆಯೋಜಿಸಿದ್ದ, ದಾವಣಗೆರೆ ದಕ್ಷಿಣ ವಲಯ ವ್ಯಾಪ್ತಿಯ ಹಿರಿಯ ಪ್ರಾಥಮಿಕ, ಪ್ರೌಢಶಾಲೆಗಳ ದೈಹಿಕ ಶಿಕ್ಷಕರ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರತಿಯೊಬ್ಬ ಶಿಕ್ಷಕರೂ ಮಕ್ಕಳ ಚಟುವಟಿಕೆಗಳ ಮೇಲೆ ಗಮನ ಕೇಂದ್ರೀಕರಿಸಿ, ಅವರ ಬೆಳವಣಿಗೆಗೆ ಶ್ರಮಿಸಬೇಕು ಎಂದು ತಿಳಿಸಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಂ. ಗಂಗಾಧರ ಸ್ವಾಮಿ ಮತ್ತು ಡಿ.ಆರ್. ಅಮಿತ್ ಮಾತನಾಡಿದರು. ಜಿಲ್ಲಾ ದೈಹಿಕ ಶಿಕ್ಷಣ ಅಧಿಕಾರಿ ಆರ್ಥರ್ ತ್ರಿಲೋಕ್‌ಸಿಂಗ್, ಸಂಘದ ಜಿಲ್ಲಾಧ್ಯಕ್ಷ ಭೈರಪ್ಪ, ಶ್ರೀಪಾದ್ ಹೆಗಡೆ, ಸುಬ್ರಹ್ಮಣ್ಯ ಭಟ್ ಭಾಗವಹಿಸಿದ್ದರು. ಶಿವಕುಮಾರ್ ಸ್ವಾಗತಿಸಿದರು. ತಾಲ್ಲೂಕು ದೈಹಿಕ ಶಿಕ್ಷಣ ಪರಿವೀಕ್ಷಕ ನಿಂಗಪ್ಪ ಪ್ರಾಸ್ತಾವಿಕ ಮಾತನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.