ರಾಯಚೂರು: ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಚುರುಕಿನಿಂದ ನಡೆದಿದ್ದು, ರಾಯಚೂರು ಜಿಲ್ಲೆ ಕೊನೆಯ ಸ್ಥಾನದಲ್ಲಿದೆ. ಈ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ರಾಜಕೀಯ ಪಕ್ಷಗಳು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಎಂ.ವಿ. ಸಾವಿತ್ರಿ ಹೇಳಿದರು.
ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಕುರಿತು ಜಿಲ್ಲಾಧಿಕಾರಿ ಕಚೇರಿ ಸಭಾಭವನದಲ್ಲಿ ಶುಕ್ರವಾರ ಕಂದಾಯ ಇಲಾಖೆ ಸಿಬ್ಬಂದಿ, ಅಧಿಕಾರಿಗಳು ಹಾಗೂ ವಿವಿಧ ರಾಜಕೀಯ ಪಕ್ಷಗಳ ಜಿಲ್ಲಾ ಘಟಕದ ಅಧ್ಯಕ್ಷರು, ಪ್ರತಿನಿಧಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಚುನಾವಣೆ ಆಯೋಗದ ನಿರ್ದೇಶನದಂತೆ ಈ ಪ್ರಕ್ರಿಯೆ ನಡೆಸಲಾಗುತ್ತಿದೆ. ಡಂಗುರ ಸಾರುವುದು, ಆಟೋಗಳ ಮೂಲಕ ಪ್ರಚಾರ ಮಾಡಿ ಮತದಾರರಿಗೆ ಈ ಬಗ್ಗೆ ಮಾಹಿತಿ ಕೊಡಬೇಕು. ಇದೇ 30ರೊಳಗೆ ಈ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ಪೂರ್ಣಗೊಳಿಸಬೇಕು ಎಂದು ಹೇಳಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ರಾಧಾಕೃಷ್ಣ ಮದನಕರ್, ಶಾಸಕ ಮಾನಪ್ಪ ವಜ್ಜಲ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ವಸಂತಕುಮಾರ, ಬಿಜೆಪಿ ಜಿಲ್ಲಾಧ್ಯಕ್ಷ ಅಮರೇಶ ಹೊಸಮನಿ, ಆರ್‌ಡಿಎ ಅಧ್ಯಕ್ಷ ರಾಜಕುಮಾರ, ಸಿಪಿಐಎಂನ ಮಲ್ಲಯ್ಯ ಜಾಲಹಳ್ಳಿ, ಕರಿಯಪ್ಪ ಅಚ್ಚೊಳ್ಳಿ, ಕೆ.ಜಿ ವಿರೇಶ, ಬಿಎಸ್ಪಿಯ ಜಯಣ್ಣ, ಜಿಲ್ಲೆಯ ತಹಶೀಲ್ದಾರರು, ಪುರಸಭೆ ಅಧ್ಯಕ್ಷರು ಮತ್ತಿತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.