ಹುಬ್ಬಳ್ಳಿ: `ಶಾಸಕ ಸ್ಥಾನಕ್ಕೆ ನೀಡಿರುವ ರಾಜೀನಾಮೆಯನ್ನು ಹಿಂಪಡೆಯುವಂತೆ ಬಿ.ಶ್ರೀರಾಮುಲು ಅವರ ಮನವೊಲಿಸಲು ಪ್ರಯತ್ನಿಸುತ್ತೇನೆ~ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಜಗದೀಶ ಶೆಟ್ಟರ ತಿಳಿಸಿದರು.
ಭಾನುವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಆತುರದ ನಿರ್ಧಾರ ಕೈಗೊಳ್ಳಬೇಡಿ, ಸ್ವಲ್ಪ ಸಮಯ ಕಾಯಿರಿ ಎಂದು ಅವರೊಂದಿಗೆ ದೂರವಾಣಿ ಮೂಲಕ ಶನಿವಾರ ಸಂಜೆ ಮಾತನಾಡಿದಾಗ ಹೇಳಿದ್ದೇನೆ. ಆದರೆ ಇಂದು ಬೆಳಿಗ್ಗೆ ರಾಜೀನಾಮೆ ನೀಡಿದರು ಎಂಬ ವಿಷಯ ತಿಳಿಯಿತು. ಅದರಿಂದ ಇನ್ನೊಮ್ಮೆ ಅವರೊಂದಿಗೆ ಮಾತುಕತೆ ನಡೆಸುತ್ತೇನೆ~ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.