ADVERTISEMENT

ಮಹಾರಾಷ್ಟ್ರಕ್ಕೆ ನಿಯೋಗ

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2012, 19:30 IST
Last Updated 10 ಏಪ್ರಿಲ್ 2012, 19:30 IST

ಬೆಳಗಾವಿ: ಮಹಾರಾಷ್ಟ್ರದ ಕೊಯ್ನಾ ಜಲಾಶಯದಿಂದ ನೀರು ಬಿಡುವಂತೆ ಮನವಿ ಮಾಡಲು ಜಲ ಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ನೇತೃತ್ವದ ತಂಡವು ಮಂಗಳವಾರ ಸಂಜೆ ಮುಂಬಯಿಗೆ ತೆರಳಿತು.

ಬೊಮ್ಮಾಯಿ ಅವರೊಂದಿಗೆ ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ ಉಮೇಶ ಕತ್ತಿ, ಶಾಸಕರಾದ ಪ್ರಕಾಶ ಹುಕ್ಕೇರಿ, ಕಾಕಾಸಾಹೇಬ ಪಾಟೀಲ, ಸಿದ್ದು ಸವದಿ ತೆರಳಿದ್ದಾರೆ.
 
ಸುದ್ದಿಗಾರರೊಂದಿಗೆ ಮಾತನಾಡಿದ ಜಲ ಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ, ರಾಜ್ಯದಲ್ಲಿನ ಕೃಷ್ಣಾ ನದಿ ತೀರದ ಗ್ರಾಮಗಳು ಎದುರಿಸುತ್ತಿರುವ ಪರಿಸ್ಥಿತಿಯನ್ನು ವಿವರಿಸಲಾಗುವುದು. ಕೊಯ್ನಾದಿಂದ ಕನಿಷ್ಠ ನಾಲ್ಕು ಟಿಎಂಸಿ ನೀರು ಬಿಡುವಂತೆ ಮನವಿ ಮಾಡಲಾಗುವುದು ಎಂದರು.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.