ಕೊಪ್ಪಳ: ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ 50ರಷ್ಟು ಮೀಸಲಾತಿ ನೀಡಿದ ಹೆಗ್ಗಳಿಕೆ ಬಿಜೆಪಿ ಸರ್ಕಾರದ್ದು. ಹೀಗಾಗಿ ಮಹಿಳೆಯರನ್ನು ಸಬಲರನ್ನಾಗಿ ಮಾಡುವ ನಿಟ್ಟಿನಲ್ಲಿ ಬಿಜೆಪಿ ಕೊಡುಗೆ ದೊಡ್ಡದು ಎಂದು ಇಂಧನ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಇಲ್ಲಿ ಶನಿವಾರ ಬಿ.ಟಿ. ಪಾಟೀಲ ನಗರದಲ್ಲಿ ಸಂಚರಿಸಿ ಪಕ್ಷದ ಅಭ್ಯರ್ಥಿ ಸಂಗಣ್ಣ ಕರಡಿ ಪರ ಮತ ಯಾಚನೆ ನಡೆಸಿದ ಸಂದರ್ಭದಲ್ಲಿ ಮಾತನಾಡಿದರು.
ವೃದ್ಧಾಪ್ಯ ವೇತನ, ವಿಧವಾ ವೇತನದ ಮೊತ್ತದಲ್ಲಿ ಹೆಚ್ಚಳ ಮಾಡಲಾಗಿದೆ. ಮಹಿಳೆಯರ ಏಳಿಗೆಗಾಗಿ ರೂಪಿಸಿರುವ ಇಂತಹ ಹಲವಾರು ಯೋಜನೆಗಳನ್ನು ಪರಿಗಣಿಸಿ ಪಕ್ಷದ ಅಭ್ಯರ್ಥಿಗೆ ಮತ ಹಾಕಿ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.
ನಗರದಲ್ಲಿ 4 ಕೋಟಿ ರೂಪಾಯಿ ವೆಚ್ಚದಲ್ಲಿ ಜಿಲ್ಲಾ ರಂಗ ಮಂದಿರ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ನಗರದಲ್ಲಿ 220 ಕೆ.ವಿ. ಸಾಮರ್ಥ್ಯದ ವಿದ್ಯುತ್ ಕೇಂದ್ರ ಸ್ಥಾಪನೆಗೆ ಶೀಘ್ರವೇ ಚಾಲನೆ ನೀಡಲಾಗುವುದು ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.