ADVERTISEMENT

ಮಹಿಳೆಯರ ಸಮಸ್ಯೆಗೆ ಸಂಶೋಧನೆ ಮೂಲಕ ಪರಿಹಾರ

​ಪ್ರಜಾವಾಣಿ ವಾರ್ತೆ
Published 17 ಏಪ್ರಿಲ್ 2012, 19:30 IST
Last Updated 17 ಏಪ್ರಿಲ್ 2012, 19:30 IST

ಶಿವಮೊಗ್ಗ: ಸಮಾಜದಲ್ಲಿ ಮಹಿಳೆ ಮತ್ತು ಮಕ್ಕಳ ಹಲವಾರು ಸಮಸ್ಯೆಗಳಿವೆ; ಅವುಗಳಿಗೆ ವಿಶ್ವವಿದ್ಯಾಲಯ ಸಂಶೋಧನೆಗಳ ಮೂಲಕ ಪರಿಹಾರ ಕಂಡುಹಿಡಿಯಬೇಕು ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಸಿ. ಮಂಜುಳಾ ಸಲಹೆ ಮಾಡಿದರು.

 ಶಂಕರಘಟ್ಟದ ಕುವೆಂಪು ವಿಶ್ವವಿದ್ಯಾಲಯದ ಜ್ಞಾನಸಹ್ಯಾದ್ರಿಯಲ್ಲಿ ಮಂಗಳವಾರ ಮಹಿಳೆಯರ ಮೂಲ ಸೌಕರ್ಯಗಳ ಅಭಿವೃದ್ಧಿ ಘಟಕ ಉದ್ಘಾಟಿಸಿ ಅವರು ಮಾತನಾಡಿದರು.

ಪ್ರಾಸ್ತಾವಿಕ ಮಾತನಾಡಿದ ಘಟಕದ ಸಂಯೋಜನಾಧಿಕಾರಿ ಡಾ.ರೇಚಲ್ ಬಾರಿ, ವಿಶ್ವವಿದ್ಯಾಲಯ ದಂತಗೋಪುರ ಆಗಬಾರದು. ವಿಶ್ವವಿದ್ಯಾಲಯದ ವ್ಯಾಪ್ತಿಯ ಗ್ರಾಮೀಣ ಮಹಿಳೆಯರಿಗೆ ಈ ಘಟಕ ನೆರವಾಗಬೇಕು. ಇದಕ್ಕೆ ವಿಶ್ವವಿದ್ಯಾಲಯದ ಎಲ್ಲರ ಸಹಕಾರ ಮುಖ್ಯ ಎಂದರು.

ಅಧ್ಯಕ್ಷತೆ ವಹಿಸಿದ್ದ ಕುಲಪತಿ ಪ್ರೊ.ಎಸ್.ಎ. ಬಾರಿ ಮಾತನಾಡಿ, ವಿದೇಶಿ ಮಹಿಳಾ ವಿದ್ವಾಂಸರನ್ನು ಇಲ್ಲಿಗೆ ಕರೆಸುವ ಮೂಲಕ ಮಹಿಳಾ ಸಮಸ್ಯೆಗಳ ಕುರಿತು ಚಿಂತನೆ ನಡೆಸಬೇಕು. ಸುವರ್ಣ ಮಹೋತ್ಸವದ ವೇಳೆಗೆ ಈ ಘಟಕ ಅಂತರರಾಷ್ಟ್ರೀಯಮಟ್ಟದ ಕೇಂದ್ರವಾಗಲಿದೆ ಎಂದು ಅಭಿಪ್ರಾಯಪಟ್ಟರು.ಸಮಾರಂಭದಲ್ಲಿ ಕುಲಸಚಿವರಾದ ಪ್ರೊ.ಟಿ.ಆರ್. ಮಂಜುನಾಥ್, ಪ್ರೊ.ಎಸ್.ಎ. ಜಾವೀದ್, ಹಣಕಾಸು ಅಧಿಕಾರಿ ಆರ್. ಹಿರೇಮಣಿ ನಾಯ್ಕ ಉಪಸ್ಥಿತರಿದ್ದರು.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.