ADVERTISEMENT

ಮುಖ್ಯಮಂತ್ರಿ ಬಗ್ಗೆ ಶಾಸಕ ಹರೀಶ್ ಟೀಕೆ

​ಪ್ರಜಾವಾಣಿ ವಾರ್ತೆ
Published 23 ಜೂನ್ 2012, 19:30 IST
Last Updated 23 ಜೂನ್ 2012, 19:30 IST

ದಾವಣಗೆರೆ: ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಮುಖ್ಯಮಂತ್ರಿ ಪದವಿಗೆ ಏರುವ ಮುನ್ನ ಇದ್ದ ನಡವಳಿಕೆಗೂ, ಇಂದಿನ ಅವರ ನಡವಳಿಕೆಗೂ ವಿರೋಧಗಳು ಎದ್ದು ಕಾಣುತ್ತಿವೆ. ಅವರು ಅಧಿಕಾರದಲ್ಲಿ ಮುಂದುವರಿಯುವುದರಿಂದ ಪಕ್ಷಕ್ಕೆ ಯಾವುದೇ ಲಾಭವಿಲ್ಲ ಎಂದು ಹರಿಹರದ ಶಾಸಕ ಬಿ.ಪಿ. ಹರೀಶ್ ಶನಿವಾರ ಟೀಕಿಸಿದರು.

ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ಸದಾನಂದಗೌಡರು ಬಿ.ಎಸ್. ಯಡಿಯೂರಪ್ಪ ಮನೆಯಲ್ಲಿ ಮಾಡಿದ ವಾಗ್ದಾನಕ್ಕೆ ಸ್ವತಃ ತಾವು ಹಾಗೂ ಅನೇಕ ಶಾಸಕ ಮಿತ್ರರು ಸಾಕ್ಷಿಯಾಗಿದ್ದೆವು. ಇಂದು ಅವರ ಧೋರಣೆ ಹಾಗೂ ನಡವಳಿಕೆ ಬದಲಾಗಿದೆ ಎಂದರು.

ಅನುದಾನದ ವಿಚಾರದಲ್ಲೂ ಮುಖ್ಯಮಂತ್ರಿ ತಾರತಮ್ಯ ಮಾಡುತ್ತಿದ್ದಾರೆ ಎಂದು ದೂರಿದರು.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.