ಮಾಗಡಿ: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ನೆನಪಿಗಾಗಿ ಪಟ್ಟಣದಲ್ಲಿ ನಿರ್ಮಿಸಿರುವ ಭವನದಲ್ಲಿ ನೀರು, ಶೌಚಾಲಯ ಸೌಲಭ್ಯವಿಲ್ಲ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.ಭವನ ನಿರ್ಮಾಣಗೊಂಡು ಎರಡು ವರ್ಷ ಪೂರ್ಣಗೊಂಡಿದ್ದರೂ ಪುರಸಭೆ ನಿರ್ಲಕ್ಷ್ಯದಿಂದಾಗಿ ಈ ಭವನ ಮೂಲ ಸೌಲಭ್ಯಗಳ ಕೊರತೆಯಿಂದ ಬಳಲುತ್ತಿದೆ ಎಂದು ಹಿರಿಯ ಚಿಂತಕ ಕೆ.ಆರ್.ರವಿಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಅಂಬೇಡ್ಕರ್ ಭವನಕ್ಕೆ ಕಾಪೌಂಡ್ ನಿರ್ಮಿಸಿ, ಪ್ರತಿಧ್ವನಿ ರಹಿತ ಒಳಾಂಗಣ ರಚನೆಗಾಗಿ ಹಲವುಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಸಹ ಪ್ರಯೋಜನವಾಗಿಲ್ಲ. ಕಳಪೆ ಕಾಮಗಾರಿಯಿಂದಾಗಿ ನಾಮಫಲಕವಿರುವ ಮುಂಭಾಗ ಶಿಥಿಲವಾಗಿದೆ ಎಂದು ಸಮಾಜ ಸೇವಕ ಬಿ.ವಿ.ಜಯರಾಮು ತಿಳಿಸಿದ್ದಾರೆ.
ತಾಲ್ಲೂಕಿನಲ್ಲಿರುವ ಡಾ. ಬಿ.ಆರ್.ಅಂಬೇಡ್ಕರ್ ಅಭಿಮಾನಿಗಳು ಪುರಸಭೆನಿರ್ಲಕ್ಷ್ಯವನ್ನು ಖಂಡಿಸಿದ್ದಾರೆ. ನಾಳೆ ಅಂಬೇಡ್ಕರ್ ದಿನಾಚರಣೆ. ಆ ವೇಳೆಗಾದರೂ ಅಂಬೇಡ್ಕರ್ ಭವನಕ್ಕೆ ಮೂಲ ಸವಲತ್ತುಗಳನ್ನು ದೊರಕಿಸಬೇಕು. ಇಲ್ಲದಿದ್ದರೆ ಶಾಂತಿಯುತ ಪ್ರತಿಭಟನೆ ನಡೆಸುವುದಾಗಿ ಅವರು ಎಚ್ಚರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.