ADVERTISEMENT

ಯೋಜನೆ ವಿಳಂಬಗೊಂಡರೆ ಕಪ್ಪುಪಟ್ಟಿಗೆ ಸೇರ್ಪಡೆ:ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 17 ಏಪ್ರಿಲ್ 2012, 19:30 IST
Last Updated 17 ಏಪ್ರಿಲ್ 2012, 19:30 IST

 ಕೊಪ್ಪಳ: ಜಿಲ್ಲೆಯಲ್ಲಿ ಅನುಷ್ಠಾನಗೊಳ್ಳುತ್ತಿರುವ ರಾಜೀವ್‌ಗಾಂದಿ ಸಬ್‌ಮಿಶನ್‌ನಡಿ ಕುಡಿಯುವ ನೀರು ಪೂರೈಕೆ ಯೋಜನೆಗಳನ್ನು ಮಳೆಗಾಲಕ್ಕೂ ಮುನ್ನ ಪೂರ್ಣಗೊಳಿಸದೇ ಇರುವ ಗುತ್ತಿಗೆದಾರರನ್ನು ಕಪ್ಪು ಪಟ್ಟಿಗೆ ಸೇರಿಸುವಂತೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಜ್ಯೋತಿ ಎನ್.ಬಿಲ್ಗಾರ್ ಸೂಚನೆ ನೀಡಿದರು.

ಮಂಗಳವಾರ ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಕೆ.ಡಿ.ಪಿ. ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಎಸ್.ರಾಜಾರಾಂ ಅವರಿಗೆ ಈ ಸೂಚನೆ ನೀಡಿದರು.

ಪಂಚಾಯತ್‌ರಾಜ್ ಎಂಜಿನಿಯರಿಂಗ್‌ನ ಎಕ್ಸಿಕ್ಯೂಟಿವ್ ಎಂಜಿನಿಯರ್ ಮುರಳೀಧರ್ ಮಾತನಾಡಿ, ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಸಂಬಂಧಿಸಿದಂತೆ 416 ಗ್ರಾಮಗಳನ್ನು ಸಮಸ್ಯಾತ್ಮಕ ಎಂದು ಗುರುತಿಸಿದ್ದು ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದರು.

ಉಪಾಧ್ಯಕ್ಷೆ ಡಾ.ಸೀತಾ ಹಲಗೇರಿ, ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ರಾಜಾರಾಂ, ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಅನ್ನದಾನಯ್ಯ, ಮುಖ್ಯ ಲೆಕ್ಕಾಧಿಕಾರಿ ರತ್ನಾನಾಯಕ, ಮುಖ್ಕ ಯೋಜನಾಧಿಕಾರಿ ಟಿ.ಪಿ.ದಂಡಿಗದಾಸರ, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.