ADVERTISEMENT

ರೈತರಿಗೆ ದ್ರೋಹ ಬಗೆದವರಿಗೆ ಉಳಿಗಾಲ ಇಲ್ಲ

​ಪ್ರಜಾವಾಣಿ ವಾರ್ತೆ
Published 21 ಜೂನ್ 2012, 18:35 IST
Last Updated 21 ಜೂನ್ 2012, 18:35 IST

ಚಿಕ್ಕಮಗಳೂರು: ರೈತರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿ ರೈತರ ಯಾವುದೇ ಸಮಸ್ಯೆಗಳಿಗೆ ಸ್ಪಂದಿಸದೆ ಅಧಿಕಾರಕ್ಕಾಗಿ ಒಳಜಗಳದಲ್ಲಿ ಮಗ್ನವಾಗಿರುವ ಬಿಜೆಪಿ ಸರ್ಕಾರದ ವಿರುದ್ಧ ರೈತ ಸಂಘ ನಿರಂತರ ಹೋರಾಟ ನಡೆಸಲಿದೆ ಎಂದು ರೈತ ಸಂಘದ ಕಾರ್ಯಾಧ್ಯಕ್ಷ ಎಚ್.ಆರ್.ಬಸವರಾಜ್ ತಿಳಿಸಿದರು.

ನಗರದಲ್ಲಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆ ನೂತನ ಜಿಲ್ಲಾಧ್ಯಕ್ಷರಾಗಿ ಆಯ್ಕೆಯಾದ ಆರ್. ಆರ್.ಮಹೇಶ್ ಅವರನ್ನು ಅಭಿನಂದಿಸಿ ಮಾತನಾಡಿದರು.

`ಜಿಲ್ಲೆಯಾದ್ಯಂತ ರೈತರಿಗೆ ಅನುಕೂಲವಾಗುವಂತೆ ನಿರಂತರ ಹೋರಾಟ ಮಾಡಬೇಕು. ಕಷ್ಟಪಟ್ಟು ಬೆಳೆದ ಬೆಳೆಗಳಿಗೆ ಉತ್ತಮ ಬೆಲೆ ಸಿಗುವಲ್ಲಿ ಪ್ರಮಾಣಿಕ ಪ್ರಯತ್ನ ಮಾಡಬೇಕು. ರೈತ ಸಂಘದ ಹೋರಾಟವೆಂದರೆ ಅಧಿಕಾರಿಗಳಿಗೆ ಎಚ್ಚರಿಕೆಯ ಗಂಟೆಯಾಗಿರಬೇಕು. ಯಾವುದೇ ಮಧ್ಯವರ್ತಿಗಳ ಪ್ರಭಾವಕ್ಕೂ ಒಳಗಾಗದೇ ರೈತರಿಗೆ ಉತ್ತಮ ದರ ದೊರಕಿಸಿಕೊಡಬೇಕು. ರೈತರಿಗೆ ಆಗುತ್ತಿರುವ ಅನ್ಯಾಯದ ಬಗ್ಗೆ ನಮ್ಮ ಹೋರಾಟ ನಿರಂತರವಾಗಿರುತ್ತದೆ~ ಎಂದರು. ನೂತನ ಜಿಲ್ಲಾ ಅಧ್ಯಕ್ಷ ಆರ್.ಆರ್.ಮಹೇಶ್ ಮಾತನಾಡಿ, ರೈತರಿಗೆ ಅನ್ಯಾಯವಾದರೆ ನ್ಯಾಯ ದೊರೆಯುವವರೆಗೂ ಹೋರಾಟ ಮಾಡಬೇಕು ಎಂದು ಕರೆ ನೀಡಿದರು.

ಸಂಘದ ಪ್ರಧಾನ ಕಾರ್ಯದರ್ಶಿ ನಾಗರಾಜ್, ಉಪಾಧ್ಯಕ್ಷರಾಗಿ ಸಿದ್ದಪ್ಪ, ರಾಮೇಗೌಡ್ರು,  ಕಾರ್ಯದರ್ಶಿಯಾಗಿ ಲೋಹಿತ್, ಜಿಲ್ಲಾ ಸಂಚಾಲಕರಾಗಿ ಅರುಣ್ ಕುಮಾರ್, ಎಂ.ಮಹೇಶ್ ಅವರನ್ನು ಆಯ್ಕೆ ಮಾಡಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.