ಮುಳಬಾಗಲು: ದೇಶಕ್ಕೆ ಸ್ವಾತಂತ್ರ್ಯ ಬಂದು 65 ವರ್ಷ ಕಳೆದರೂ ರೈತರ ಸಂಕಷ್ಟ ಹಾಗೂ ರೈತರ ಕ್ಷೇಮಾಭಿವೃದ್ಧಿ ಸಲುವಾಗಿ ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಸರ್ಕಾರಗಳು ವಿಫಲವಾಗಿವೆ ಎಂದು ಶಾಸಕ ಅಮರೇಶ್ ಇಲ್ಲಿ ಬುಧವಾರ ವಿಷಾದಿಸಿದರು.
ರೇಷ್ಮೆ ಮತ್ತು ಟೊಮೆಟೊ ಬೆಳೆಗಾರರ ಸಮಾವೇಶದಲ್ಲಿ ಮಾತನಾಡಿ, ರೈತರ ಸಂಕಷ್ಟಗಳಿಗೆ ಸರ್ಕಾರಗಳು ಸ್ಪಂದಿಸದಿದ್ದರೆ ಭವಿಷ್ಯದಲ್ಲಿ ಆಹಾರ ಅಭಾವ ಉಂಟಾಗಲಿದೆ ಎಂದು ಎಚ್ಚರಿಸಿದರು.ಕಿಸಾನ್ ಸಭಾದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಗೋಪಾಲ್ ಮಾತನಾಡಿ ಬೇಸಾಯ ಪದ್ಧತಿ ಸುಧಾರಣೆಗೆ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತರುತ್ತಿದೆ.
ಆದರೆ ಅಧಿಕಾರಿಗಳು, ರಾಜಕಾರಣಿಗಳ ಕಪಿಮುಷ್ಠಿಗಳಿಂದ ಯೋಜನೆಗಳು ರೈತರಿಗೆ ತಲುಪುತ್ತಿಲ್ಲ ಎಂದರು. ರೈತಸೇನೆ ರಾಜ್ಯ ಘಟಕದ ಗೌರವಾಧ್ಯಕ್ಷ ಡಾ.ಎಸ್.ವಿ.ರಮೇಶ್, ಅಧ್ಯಕ್ಷ ಆರ್.ನಾರಾಯಣಗೌಡ, ತಾಲ್ಲೂಕು ಪಂಚಾಯತಿ ಅಧ್ಯಕ್ಷೆ ತ್ರೀವೇಣಮ್ಮ.
ಉಪಾಧ್ಯಕ್ಷ ಎಂ.ಎಸ್.ಶ್ರೀನಿವಾಸರೆಡ್ಡಿ, ಕನ್ನಡಭಟ ವೆಂಕಟಪ್ಪ, ವರ್ತಕರ ಸಂಘದ ಅಧ್ಯಕ್ಷ ಎನ್.ಆರ್.ಸತ್ಯಾ, ವಕೀಲರ ಸಂಘ ತಾಲ್ಲೂಕು ಘಟಕದ ಉಪಾಧ್ಯಕ್ಷ ಜಯಪ್ಪ, ನಾಗರಾಜ್. ಎಸ್.ಎನ್.ರಾಮಕೃಷ್ಣೇಗೌಡ, ಕುಮಾರಾಚಾರಿ ಮಾತನಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.