ADVERTISEMENT

ವಾಲ್ಮೀಕಿ ಜನಾಂಗಕ್ಕೆ ಹೆಚ್ಚಿನ ಮೀಸಲಾತಿಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2011, 19:30 IST
Last Updated 11 ಅಕ್ಟೋಬರ್ 2011, 19:30 IST

ವಿಜಾಪುರ: ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಮಂಗಳವಾರ ನಗರವೂ ಸೇರಿದಂತೆ ಜಿಲ್ಲೆಯಲ್ಲಿ ಅದ್ದೂರಿಯಾಗಿ ಆಚರಿಸಲಾಯಿತು.

ಇಲ್ಲಿಯ ಸಿದ್ಧೇಶ್ವರ ದೇವಸ್ಥಾನದಿಂದ ಹಮ್ಮಿಕೊಂಡಿದ್ದ ವಾಲ್ಮೀಕಿ ಮಹರ್ಷಿಗಳ ಭಾವಚಿತ್ರದ ಮೆರವಣಿಗೆಗೆ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ ನಿರಾಣಿ ಚಾಲನೆ ನೀಡಿದರು.

ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ನಡೆದ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ವಿಠ್ಠಲ ಕಟಕಧೋಂಡ, ವಾಲ್ಮೀಕಿ ಜನಾಂಗದ ಅಭಿವೃದ್ಧಿಗೆ ಸರ್ಕಾರ ಪ್ರತ್ಯೇಕ ಇಲಾಖೆ ಸ್ಥಾಪಿಸಬೇಕು. ಮೀಸಲಾತಿಯನ್ನು ಹೆಚ್ಚಿಸಿ ವಿಶೇಷ ಅನುದಾನ ನೀಡಬೇಕು ಎಂದು ಆಗ್ರಹಿಸಿದರು.

ಪ್ರೊ.ಮಹಾದೇವ ರೆಬಿನಾಳ, ಪ್ರಭಾರ ಜಿಲ್ಲಾಧಿಕಾರಿ ಜಿ.ಎಸ್. ಜಿದ್ದಿಮನಿ ಮಾತನಾಡಿದರು. ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಶಂಕ್ರುಬಾಯಿ ಚಲವಾದಿ ಕಾರ್ಯಕ್ರಮ ಉದ್ಘಾಟಿಸಿದರು. ಜಿ.ಪಂ. ಉಪಾಧ್ಯಕ್ಷ ಶ್ರೀಶೈಲಗೌಡ ಬಿರಾದಾರ, ವಿಧಾನ ಪರಿಷತ್ ಸದಸ್ಯ ಅರುಣ ಶಹಾಪುರ, ಜಿ.ಪಂ. ಸದಸ್ಯರಾದ ಮಲ್ಲು ಕನ್ನೂರ, ಅನುಸೂಯಾ ಜಾಧವ, ಎಪಿಎಂಸಿ ಮಾಜಿ ಅಧ್ಯಕ್ಷ ಮಲ್ಲು ಕವಲಗಿ, ಮುಖಂಡರಾದ ಮುಳಸಿದ್ಧಪ್ಪ ನಾಯ್ಕೋಡಿ, ಇತರರು  ಇತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.