ಬಾಗೇಪಲ್ಲಿ: ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಮಿನಿ ಟೆಂಪೊ ರಸ್ತೆ ಮೇಲೆ ಉರುಳಿಬಿದ್ದ ಪರಿಣಾಮ ಒಬ್ಬ ಸ್ಥಳದಲ್ಲೇ ಮೃತಪಟ್ಟು 15 ಮಂದಿ ಗಾಯಗೊಂಡ ಘಟನೆ ಸೋಮವಾರ ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ-7ರಲ್ಲಿ ಸಂಭವಿಸಿದೆ. ರಾಯಚೂರು ಮೂಲದ ನಾಗಪ್ಪ (18) ಮೃತಪಟ್ಟವರು. ಬಹುತೇಕ ಕಾರ್ಮಿಕರು ರಾಯಚೂರು, ಯಾದಗಿರಿ ಜಿಲ್ಲೆಯವರಾಗಿದ್ದು, ಯಲ್ಲಮ್ಮ ಮತ್ತು ಶ್ರೀಕುಮಾರ್ ಎಂಬುವರಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಇಬ್ಬರಿಗೂ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಬೆಂಗಳೂರು ಆಸ್ಪತ್ರೆಗೆ ಕಳುಹಿಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.