ADVERTISEMENT

ವಿದ್ಯಾರ್ಥಿಗಳಿಗೆ ಉದ್ಯೋಗ ಆಧಾರಿತ ತರಬೇತಿ

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2011, 17:25 IST
Last Updated 4 ಫೆಬ್ರುವರಿ 2011, 17:25 IST

ತರೀಕೆರೆ: ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ಉದ್ಯೋಗಾಧಾರಿತ ಕೈಗಾರಿಕಾ ತರಬೇತಿ ನೀಡಲು ಮುಂಬರುವ ಬಜೆಟ್‌ನಲ್ಲಿ ಹೊಸ ಯೋಜನೆ ಪ್ರಕಟಿಸಲಾಗುವುದು ಎಂದು ಸಮಾಜ ಕಲ್ಯಾಣ ಮತ್ತು ಬಂದಿಖಾನೆ ಸಚಿವ ಎ. ನಾರಾಯಣಸ್ವಾಮಿ ಹೇಳಿದರು.

ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಆಗಮಿಸಿದ್ದ ಅವರು ಇಲ್ಲಿನ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರ ಜತೆ ಮಾತನಾಡಿದರು.

ಜನಸಂಖ್ಯೆಗೆ ಅನುಗುಣವಾಗಿ ಜಿಲ್ಲಾ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಕೈಗಾರಿಕಾ ತರಬೇತಿ ಕೇಂದ್ರ ತೆರೆಯಲು ಸರ್ಕಾರ ನಿರ್ಧರಿಸಿದ್ದು, ಮೊದಲ ಹಂತದಲ್ಲಿ ಶಿವಮೊಗ್ಗ ಜಿಲ್ಲೆಯಲ್ಲಿ ಟೈಲರಿಂಗ್ ತರಬೇತಿ ಕೇಂದ್ರ ಆರಂಭಿಸಲಾಗುವುದು. ನೇಕಾರರಿಗೂ ತರಬೇತಿ ಕೇಂದ್ರ ಸ್ಥಾಪಿಸಲಾಗುವುದು ಎಂದರು.

ಪ್ರತಿ ತಾಲ್ಲೂಕು ಕೇಂದ್ರಗಳಲ್ಲಿ ಜನಸಂಖ್ಯೆ ಆಧಾರದ ಮೇಲೆ ರೂ. 1 ಕೋಟಿಯಿಂದ ರೂ. 5 ಕೋಟಿ ಮೊತ್ತದಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಮತ್ತು ಬಾಬು ಜಗಜೀವನರಾಂ ಸಮುದಾಯ ಭವನವನ್ನು ನಿರ್ಮಿಸಲು ರಾಜ್ಯ ಸರ್ಕಾರ ಮುಂದಾಗಿದೆ ಎಂದರು.

ಹಾಸ್ಟೆಲ್‌ಗಳನ್ನು ಅಭಿವೃದ್ಧಿಗೊಳಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು. ಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಕೆ.ನಾಗರಾಜ್, ಪುರಸಭಾ ಸದಸ್ಯೆ ಸೌಭಾಗ್ಯ ಆಂಜನೇಯ, ಮುಖಂಡರಾದ ಜಿ.ಟಿ.ರಮೇಶ್, ಟಿ.ಆರ್.ಬಸವರಾಜ್, ಡಿ.ಇ.ನಾಗರಾಜ್, ಕೃಷ್ಣಮೂರ್ತಿ, ಮಲ್ಲಿಕಾರ್ಜುನ್ ಮತ್ತು ಲೋಕೇಶಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.