
ಪ್ರಜಾವಾಣಿ ವಾರ್ತೆವಿಜಯಪುರ: ಇಲ್ಲಿನ ಸರ್ಕಾರಿ ಉರ್ದು ಪ್ರೌಢಶಾಲಾ ಆವರಣದಲ್ಲಿ ಇರುವ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ. ಪ್ರೌಢಶಾಲೆ ಮತ್ತು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು 500 ಕ್ಕೂ ಹೆಚ್ಚು ಮಕ್ಕಳು ವ್ಯಾಸಂಗ ಮಾಡುತ್ತಿದ್ದು, ವಿದ್ಯುತ್ ಕಂಬಗಳಿರುವುದರಿಂದ ಕ್ರೀಡಾ ಚಟುವಟಿಕೆಗಳಿಗೆ ತೊಂದರೆಯಾಗಿದೆ. ಆದ್ದರಿಂದ ಕೂಡಲೇ ವಿದ್ಯುತ್ ಕಂಬಗಳನ್ನು ಶಾಲಾ ಕಾಂಪೌಂಡ್‌ನಿಂದ ಹೊರ ಭಾಗಕ್ಕೆ ಸ್ಥಳಾಂತರಿಸಬೇಕು.
ಅಲ್ಲದೇ ಶಾಲಾ ಆವರಣದಲ್ಲಿ ಹೆಚ್ಚುವರಿ ಕೊಠಡಿಗಳ ನಿರ್ಮಾಣ ಕಾಮಗಾರಿ ನಡೆಯುತ್ತಿದ್ದು, ವಿದ್ಯುತ್ ತಂತಿ ಹಾದು ಹೋಗಿರುವುದರಿಂದ ಕಾಮಗಾರಿಗೆ ಅಡಚಣೆಯಾಗುತ್ತಿದೆ. ಬೆಸ್ಕಾಂ ಅಧಿಕಾರಿಗಳಿಗೆ ಈ ಬಗ್ಗೆ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ. ಈ ಕೂಡಲೇ ಅಧಿಕಾರಿಗಳು ಗಮನಹರಿಸಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸ ಬೇಕು ಎಂದು ಪೋಷಕರು ಆಗ್ರಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.