ADVERTISEMENT

ವಿಶ್ವಪರಂಪರೆ ಪಟ್ಟಿಗೆ ಬೇಲೂರು -ಹಳೇಬೀಡು

​ಪ್ರಜಾವಾಣಿ ವಾರ್ತೆ
Published 24 ಅಕ್ಟೋಬರ್ 2011, 19:30 IST
Last Updated 24 ಅಕ್ಟೋಬರ್ 2011, 19:30 IST

ಬೇಲೂರು: `ರಾಜ್ಯದ ಪ್ರಮುಖ ಪ್ರವಾಸಿ ಕೇಂದ್ರಗಳಾಗಿರುವ ಬೇಲೂರು-ಹಳೇಬೀಡು-ಶ್ರವಣಬೆಳಗೊಳಗಳನ್ನು ವಿಶ್ವ ಪರಂಪರೆ ಪಟ್ಟಿಗೆ ಸೇರಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಅಗತ್ಯ ಕ್ರಮ ಕೈಗೊಳ್ಳಬೇಕು~ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ರೇವಣ್ಣ ಹೇಳಿದರು.

ಇಲ್ಲಿನ ಪುರಸಭೆ ವತಿಯಿಂದ ಸೋಮವಾರ ಏರ್ಪಡಿಸಿದ್ದ ಸುಮಾರು 2 ಕೋಟಿ ರೂಪಾಯಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು ಬೇಲೂರು, ಹಳೇಬೀಡು ಮತ್ತು ಶ್ರವಣಬೆಳಗೊಳಗಳನ್ನು ವಿಶ್ವ ಪರಂಪರೆ ಪಟ್ಟಿಗೆ ಸೇರ್ಪಡೆ ಮಾಡುವ ಸಂಬಂಧ ತಾವು ಸಚಿವರಾಗಿದ್ದ ಅವಧಿಯಲ್ಲಿ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.

ಆ ನಂತರ ಬಂದವರು ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ. ವಿಶ್ವ ಪರಂಪರೆ ಪಟ್ಟಿಗೆ ಸೇರಿಸಲು ದೇವೇಗೌಡರ ಮೂಲಕ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲಾಗುವುದು~ ಎಂದರು.

ಶಾಸಕ ವೈ.ಎನ್. ರುದ್ರೇಶ್‌ಗೌಡ ಅಧ್ಯಕ್ಷತೆ ವಹಿಸಿದ್ದರು. ಶಾಸಕರಾದ ಎಚ್.ಕೆ.ಕುಮಾರಸ್ವಾಮಿ, ಪಟೇಲ್ ಶಿವರಾಂ, ಜಿ.ಪಂ. ಅಧ್ಯಕ್ಷ ಬಿ.ಡಿ.ಚಂದ್ರೇಗೌಡ, ಮಾಜಿ ಸಂಸದ ಎಚ್.ಕೆ.ಜವರೇಗೌಡ, ಪುರಸಭಾಧ್ಯಕ್ಷ ಎಚ್.ಎಂ.ದಯಾನಂದ್, ತಾ.ಪಂ. ಅಧ್ಯಕ್ಷೆ ಕಮಲ ಚನ್ನಪ್ಪ, ಜಿ.ಪಂ. ಸದಸ್ಯರಾದ ಎಂ.ವಿ.ಹೇಮಾವತಿ, ಜಿ.ಟಿ.ಇಂದಿರಾ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.