ADVERTISEMENT

ಸಚಿವರ ವಿರುದ್ಧ ಪ್ರತಿಭಟನೆ; ಡಿಎಸ್‌ಎಸ್ ಕಾರ್ಯಕರ್ತರ ಬಂಧನ

​ಪ್ರಜಾವಾಣಿ ವಾರ್ತೆ
Published 4 ಜುಲೈ 2012, 6:15 IST
Last Updated 4 ಜುಲೈ 2012, 6:15 IST

ದಾವಣಗೆರೆ: ಕೊಳಚೆ ಪ್ರದೇಶದಲ್ಲಿ ಅಂಬೇಡ್ಕರ್ ಭವನ ಸ್ಥಾಪಿಸುತ್ತಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದ ಕರ್ನಾಟಕ ದಲಿತ ಸಂಘರ್ಷ ಸಮಿತಿ( ಪ್ರೊ.ಕೃಷ್ಣಪ್ಪ ಬಣ) ಕಾರ್ಯಕರ್ತರನ್ನು ಬುಧವಾರ ಪೊಲೀಸರು ಬಂಧಿಸಿದರು.

ನಗರದಲ್ಲಿ ಇಂದು ಅಂಬೇಡ್ಕರ್ ಭವನ ಸಹಿತ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಸಮಾಜ ಕಲ್ಯಾಣ ಸಚಿವ ನಾರಾಯಣ ಸ್ವಾಮಿ ಗುದ್ದಲಿ ಪೂಜೆ ನೆರವೇರಿಸುವ ಕಾರ್ಯಕ್ರಮವಿತ್ತು. ಆದರೆ, ಅಂಬೇಡ್ಕರ್ ಭವನವನ್ನು ಕೊಳಚೆ ಪ್ರದೇಶದಲ್ಲಿ ಸ್ಥಾಪಿಸುವ ಬದಲು ಬೇರೆ ಸ್ಥಳದಲ್ಲಿ ನಿರ್ಮಿಸಬೇಕು. ಇದರಿಂದ ಎಲ್ಲರಿಗೂ ಅನುಕೂಲವಾಗಲಿದೆ ಎಂದು ದಸಂಸ ಆಗ್ರಹಿಸಿತ್ತು. ಒಂದು ವೇಳೆ ಈ ಬೇಡಿಕೆ ಈಡೇರಿಸದಿದ್ದರೆ ಸಚಿವರಿಗೆ ಕಪ್ಪು ಬಾವುಟ ತೋರಿಸುವುದಾಗಿಯೂ ಸಂಘಟನೆ ಮುಖಂಡರು ಎಚ್ಚರಿಸಿದ್ದರು.

ಬೆಳಿಗ್ಗೆ ಅಂಬೇಡ್ಕರ್ ವೃತ್ತದಲ್ಲಿ ಸೇರಿ ಪ್ರತಿಭಟನಾ ಮೆರವಣಿಗೆ ನಡೆಸಲು ಸಿದ್ಧರಾಗಿದ್ದಾಗ ಪೊಲೀಸರು ಬಂಧಿಸಿದರು. ಅತ್ತ ಅಭಿನವ ರೇಣುಕ ಮಂದಿರದಲ್ಲಿ ಪೂರ್ವನಿಗದಿಯಾಗಿದ್ದಂತೆ ಶಂಕುಸ್ಥಾಪನಾ ಸಮಾರಂಭ ನಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.