ADVERTISEMENT

ಸಮರ್ಪಕ ನೀರು ಪೂರೈಕೆಗೆ ಕ್ರಮ

​ಪ್ರಜಾವಾಣಿ ವಾರ್ತೆ
Published 16 ಮಾರ್ಚ್ 2011, 19:30 IST
Last Updated 16 ಮಾರ್ಚ್ 2011, 19:30 IST

ಯಾದಗಿರಿ: ಬೇಸಿಗೆಯಲ್ಲಿ ಜಿಲ್ಲೆಯಾದ್ಯಂತ ಕುಡಿಯುವ ನೀರು ಪೂರೈಕೆಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲಾಗಿದ್ದು, ಈಗಾಗಲೇ ಅವಶ್ಯಕತೆ ಇರುವ ಸ್ಥಳಗಳಲ್ಲಿ ನೀರಿನ ವ್ಯವಸ್ಥೆ ಮಾಡಲು ಕ್ರಿಯಾಯೋಜನೆಯನ್ನು ಸಿದ್ಧಪಡಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗುರನೀತ್ ತೇಜ್ ಮೆನನ್ ತಿಳಿಸಿದರು.

ಬುಧವಾರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಪ್ರಥಮ ಸಾಮಾನ್ಯಸಭೆಯಲ್ಲಿ ಈ ವಿಷಯ ತಿಳಿಸಿದ ಅವರು, “ಜಿಲ್ಲೆಯಲ್ಲಿ ಜಿ.ಪಂ. ಅನುದಾನದಡಿ ರೂ.58.10 ಲಕ್ಷ ಹಾಗೂ ಜಿಲ್ಲಾಧಿಕಾರಿಗಳ ಅನುದಾನದಡಿ ರೂ.1.09 ಕೋಟಿ ವೆಚ್ಚದ ಕ್ರಿಯಾಯೋಜನೆ ಸಿದ್ಧಪಡಿಸಲಾಗಿದೆ” ಎಂದರು.

ಇದರ ಜೊತೆಗೆ ಎಲ್ಲಿಯಾದರೂ ನೀರು ಪೂರೈಕೆಯಲ್ಲಿ ಅವ್ಯವಸ್ಥೆ ಕಂಡು ಬಂದಲ್ಲಿ ತುರ್ತು ನಿರ್ವಹಣೆಗೆ ವಾಲ್ವ್‌ಮನ್‌ಗಳನ್ನು ಒಳಗೊಂಡ ತಂಡವನ್ನು ರಚಿಸಲಾಗಿದೆ. ಜೊತೆಗೆ ತಾಲ್ಲೂಕುವಾರು ಸಹಾಯವಾಣಿಯನ್ನು ಆರಂಭಿಸಲಾಗುತ್ತಿದೆ. ನೀರು ಪೂರೈಕೆಗೆ ಸಂಬಂಧಿಸಿದಂತೆ ಯಾವುದಾದರೂ ದೂರು ಬಂದಲ್ಲಿ ಕೂಡಲೇ ಈ ತಂಡ ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಪರಿಹರಿಸಲಿದೆ” ಎಂದರು.

ಬಸವರಾಜ ಖಂಡ್ರೆ ಮಾತನಾಡಿ, ರೈತರ ಗದ್ದೆಗಳಿಂದ ರಾಸಾಯನಿಕ ಹೊಂದಿದ ನೀರನ್ನು ಭೀಮಾ ನದಿಗೆ ಬಿಡಲಾಗುತ್ತಿದೆ. ಇದರಿಂದ ನದಿ ತೀರದ ಹಳ್ಳಿಗಳಲ್ಲಿ ಶುದ್ಧ ಕುಡಿಯುವ ನೀರು ಸಿಗುತ್ತಿಲ್ಲ ಎಂದು ದೂರಿದರು.

 ಜಿ.ಪಂ. ಸದಸ್ಯ ಸಿದ್ಧನಗೌಡ ಪೊಲೀಸ್‌ಪಾಟೀಲ, ಎಚ್.ಸಿ. ಪಾಟೀಲ ಮಾತನಾಡಿದರು

 ಈ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಸಿಇಓ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT