ADVERTISEMENT

ಸಮಸ್ಯೆ ಇತ್ಯರ್ಥಕ್ಕೆ ಜನಸ್ಪಂದನಾ ಸಭೆ

​ಪ್ರಜಾವಾಣಿ ವಾರ್ತೆ
Published 3 ಸೆಪ್ಟೆಂಬರ್ 2011, 19:30 IST
Last Updated 3 ಸೆಪ್ಟೆಂಬರ್ 2011, 19:30 IST

ಚಿಂತಾಮಣಿ:  ಹೋಬಳಿ ಹಂತದ ವಿವಿಧ ಅಧಿಕಾರಿಗಳು ಒಂದೆಡೆ ಸೇರಿ ಜನರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಸರ್ಕಾರ ಜನಸ್ಪಂದನಾ ಕಾರ್ಯಕ್ರಮ ಜಾರಿಗೆ ತಂದಿದೆ. ಸಾರ್ವಜನಿಕರು ಸಭೆಗಳಲ್ಲಿ ಭಾಗವಹಿಸಿ ಸಮಸ್ಯೆ ಪಡಿಸಿಕೊಳ್ಳಬೇಕು ಎಂದು ತಹಶೀಲ್ದಾರ್ ಕೃಷ್ಣಮೂರ್ತಿ ತಿಳಿಸಿದರು.

ತಾಲ್ಲೂಕಿನ ಆನೂರು ಗ್ರಾಮದಲ್ಲಿ ತಾಲ್ಲೂಕು ಆಡಳಿತ ಶನಿವಾರ ಏರ್ಪಡಿಸಿದ್ದ ಜನಸ್ಪಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ಲಿಖಿತವಾಗಿ ನೀಡಬೇಕು. ಸ್ಥಳದಲ್ಲೇ ಬಗೆಹರಿಸಬಹುದಾದ ಸಮಸ್ಯೆಗಳನ್ನು ಪರಿಹರಿಸಲಾಗುವುದು. ವಿವಿಧ ಹಂತಗಳಲ್ಲಿ ಬಗೆಹರಿಸಬಹುದಾದ ಸಮಸ್ಯೆಗಳನ್ನು ಶೀಘ್ರ ಕಚೇರಿಗಳಲ್ಲಿ ಪರಿಶೀಲಿಸಿ ಇತ್ಯರ್ಥಪಡಿಸಲಾಗುವುದು ಎಂದರು.

ರೈತರ ಅನುಕೂಲಕ್ಕೆ ಇರುವ ಅರಣ್ಯ ಇಲಾಖೆ ಸೂಕ್ತ ರೀತಿಯಲ್ಲಿ ಕೆಲಸ ಮಾಡುತ್ತಿಲ್ಲ ಎಂದು ಸಭೆಯಲ್ಲಿ ಸಾರ್ವಜನಿಕರು ಆರೋಪಿಸಿದಾಗ ಲಿಖಿತ ದೂರು ನೀಡಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ಭರವಸೆ ನೀಡಿದರು.

ಪಶುಪಾಲನಾ ಇಲಾಖೆ ವತಿಯಿಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಯಾವ ಅನುಕೂಲಗಳು ಆಗುತ್ತಿಲ್ಲ ಎಂದು ಜನರು ದೂರಿದರು. ಅಧಿಕಾರಿಗಳ ಗೈರು ಹಾಜರಿ ಬಗ್ಗೆ ಕ್ರಮಕೈಗೊಳ್ಳಬೇಕು ಎಂದು ರೈತ ಸಂಘದ ಪದಾಧಿಕಾರಿಗಳು ಆಗ್ರಹಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.