ADVERTISEMENT

ಸಮಾನ ಸೌಲಭ್ಯ: ಮಹಿಳೆಯರಿಗೆ ಸಲಹೆ

​ಪ್ರಜಾವಾಣಿ ವಾರ್ತೆ
Published 15 ಮಾರ್ಚ್ 2011, 19:15 IST
Last Updated 15 ಮಾರ್ಚ್ 2011, 19:15 IST

ಚಿಂತಾಮಣಿ: ಹಕ್ಕು, ಕರ್ತವ್ಯ ಹಾಗೂ ಸಂಪ್ರದಾಯಗಳು ಪುರುಷರು ಮತ್ತು ಮಹಿಳೆಯರಿಗೆ ಯಾವುದೇ ತಾರತಮ್ಯವಿಲ್ಲದೆ ಸಮಾನವಾಗಿರಬೇಕು ಎಂದು ಡಿವೈಎಸ್‌ಪಿ ಆನಂದ್ ಇಲ್ಲಿ ಮಂಗಳವಾರ ಅಭಿಪ್ರಾಯಪಟ್ಟರು.

ನಗರದ ಪ್ರವಾಸಿ ಮಂದಿರದಲ್ಲಿ ಜೀವಿಕ ಸಂಸ್ಥೆ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಹೈನುಗಾರಿಕೆ ಇಲ್ಲದಿದ್ದರೆ ಎಷ್ಟೋ ಕುಟುಂಬಗಳು ಉಪವಾಸ ಮಾಡಬೇಕಾಗಿತ್ತು. ಗ್ರಾಮೀಣ ಭಾಗಗಳ ಅನೇಕ ಕುಟುಂಬಗಳಲ್ಲಿ ಹೈನುಗಾರಿಕೆಯಿಂದ ಮಹಿಳೆಯರು ಕುಟುಂಬವನ್ನು ಪೋಷಿಸುತ್ತಿದ್ದಾರೆ. ಮಹಿಳೆಯರು ಅಕ್ಷರಸ್ಥರಾಗಿ, ಆರ್ಥಿಕವಾಗಿ ತಮ್ಮ ಕಾಲ ಮೇಲೆ ತಾವು ನಿಂತು ಸ್ವಾಭಿಮಾನದಿಂದ ಜೀವನ ನಡೆಸುವ ಪರಿಸ್ಥಿತಿ ಬಂದಾಗ ಮಾತ್ರ ಮಹಿಳೆಯರ ಸ್ಥಾನಮಾನ ಹೆಚ್ಚುತ್ತದೆ ಎಂದು ಅವರು ಹೇಳಿದರು. ತಹಶೀಲ್ದಾರ್ ಕೃಷ್ಣಮೂರ್ತಿ ಅಧ್ಯಕ್ಷತೆ ವಹಿಸಿದ್ದರು.

ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾ ಧಿಕಾರಿ ರಂಗನಾಥ ಸ್ವಾಮಿ, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಓಂಕಾರಪ್ಪ, ವಕೀಲರಾದ ರೂಪಶ್ರೀ ಮಾತನಾಡಿದರು. ಸ್ವಯಂ ಸೇವಾ ಸಂಸ್ಥೆಯ ನಾರಾಯಣಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.