ADVERTISEMENT

ಸಮಾವೇಶಕ್ಕೆ ತೀರ್ಮಾನಿಸಿಲ್ಲ: ಸ್ಪಷ್ಟನೆ

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2012, 19:30 IST
Last Updated 12 ಮಾರ್ಚ್ 2012, 19:30 IST

ಚಿತ್ರದುರ್ಗ: ಬಜೆಟ್ ಅಧಿವೇಶನದ ನಂತರ ವಿಜಾಪುರದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಹಿಂದುಳಿದ ವರ್ಗಗಳ ಸಮಾವೇಶ ನಡೆಸುವ ಯಾವುದೇ ತೀರ್ಮಾನವನ್ನು ಹಿಂದುಳಿದ ದಲಿತ ಮಠಾಧೀಶರ ಒಕ್ಕೂಟ ತೀರ್ಮಾನಿಸಿಲ್ಲ ಎಂದು ಹಿಂದುಳಿದ ದಲಿತ ಮಠಾಧೀಶರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ಸ್ಪಷ್ಟನೆ ನೀಡಿದ್ದಾರೆ.

ಮಾಧ್ಯಮಗಳಲ್ಲಿ ವರದಿಯಾಗಿರುವಂತೆ ಹಿಂದುಳಿದ, ದಲಿತ ಮಠಾಧೀಶರ ಒಕ್ಕೂಟ ಸಮಾವೇಶ ನಡೆಸಲು ತೀರ್ಮಾನಿಸಿದೆ ಎನ್ನುವುದು ನಿರ್ಧಾರವಾಗದ ಸಂಗತಿಯಾಗಿದೆ.

ಒಕ್ಕೂಟದ ವತಿಯಿಂದ ಸುಮಾರು 25ಕ್ಕೂ ಹೆಚ್ಚು ಮಠಾಧೀಶರು ಮುಖ್ಯಮಂತ್ರಿ ಸದಾನಂದಗೌಡರ ಸಮ್ಮುಖದಲ್ಲಿ ಸಭೆ ನಡೆಸಿದ್ದು, ಸಮಾವೇಶದ ಬಗ್ಗೆ ಚರ್ಚಿಸಿಲ್ಲ ಎಂದು ಹೇಳಿದ್ದಾರೆ.
 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.